
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ ಸ್ಟಾಗ್ರಾಂನಲ್ಲಿ ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಫೋಟೋ, ಮೆಸೇಜ್ ಮಾಡಿದ್ದು ಸತ್ಯ ಎಂದು ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ ಎನ್ನಲಾಗಿದೆ.


ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು, ಈ ನಡುವೆ ಪವಿತ್ರಾಗೌಡಗೆ ಅಶ್ಲೀಲ ಫೋಟೋ, ಮೆಸೇಜ್ ಕಳಿಸಿದ್ದು ನಿಜ : ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ.
ಇನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 4500 ಪುಟಗಳ ಚಾರ್ಜ್‌ಶೀಟ್ ಮುಕ್ತಾಯಗೊಂಡಿದ್ದು, ಶೀಘ್ರವೇ ಸಲ್ಲಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಪರಾಧಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶವಾಗಬಾರದೆಂದು ಕಾನೂನು ತಜ್ಞರ ಸಲಹೆಯನ್ನೂ ಪಡೆಯಲಾಗಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ನಡೆಸಲಾಗಿದೆ. 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.


ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ. ಹಾಗಾಗಿ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಈಗಾಗಲೇ ಕಾನೂನು ತಜ್ಞರಿಂದ ಪೊಲೀಸ್ ಇಲಾಖೆ ಸಲಹೆಯನ್ನೂ ಪಡೆದಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ಮಾಡಲಾಗಿದೆ. ಅಪರಾಧಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬಾರದು ಎಂದು ಖಾಕಿ ಪಡೆ ಭಾರೀ ಎಚ್ಚರಿಕೆ ವಹಿಸಿದೆ.

Hello,
for your website do be displayed in searches your domain needs to be indexed in the Google Search Index.
To add your domain to Google Search Index now, please visit
https://searchregister.info/
Hello,
for your website do be displayed in searches your domain needs to be indexed in the Google Search Index.
To add your domain to Google Search Index now, please visit
https://SearchRegister.net