
Read Time:1 Minute, 4 Second
ಮಂಗಳೂರು : ನಗರದ ಹೊರವಲಯದ ತಲಪಾಡಿ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ನಾರ್ಲ ಪಡೀಲ್ ಕಿರಣ್ ಡಿಸೋಜ (25) ಬಂಧಿತ ಆರೋಪಿ. ಕಿರಣ್ ಡಿಸೋಜ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿಯ ಅತಿಥಿ ಬಾರ್ ಬಳಿ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ. ಅಲ್ಲಿಗೆ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸಿ, 10 ಗ್ರಾಂ ತೂಕದ 30,000 ರೂ. ಮೌಲ್ಯದ ಎಂಡಿಎಂಎ, ಸ್ಕೂಟರ್ ಮತ್ತು ಮೊಬೈಲ್ ಫೋನ್‌ಅನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 65,500 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

