ಮೈಸೂರು ದಸರಾ : ಐತಿಹಾಸಿಕ 415ನೇ ಜಂಬೂ ಸವಾರಿಗೆ ಕ್ಷಣಗಣನೆ

0 0
Read Time:1 Minute, 41 Second

ಇಂದು ವಿಜಯದಶಮಿ ನಾಡಿನೆಲ್ಲೆಡೆ ಕಳೆಗಟ್ಟಿದೆ. ಅದರಲ್ಲೂ 415ನೇ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ. 5ನೇ ಬಾರಿ ಕ್ಯಾಪ್ಟನ್​​​ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಇನ್ನು, ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಸ್ತಬ್ಧಚಿತ್ರಗಳು, ಕಲಾತಂಡಗಳ ಪ್ರದರ್ಶನ ಮೆರಗು ನೀಡಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು  ಆನೆ ರಾಜ ಗಾಂಭಿರ್ಯದಿಂದ ರಾಜಬೀದಿಗಳಲ್ಲಿ ಸಾಗಲಿದ್ದಾನೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡ್ಲಿದ್ದಾರೆ. ಜಂಬೂಸವಾರಿ ಉದ್ಘಾಟನೆ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಮೈಸೂರು ಕೊಡಗು ಸಂಸದ ಹಾಗೂ ರಾಜವಂಶಸ್ಥರಾದ ಯದುವೀರ್ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ, ಸಾಥ್ ನೀಡಲಿದ್ದಾರೆ. ಇನ್ನು, ಚಿನ್ನದ ಅಂಬಾರಿ ಹೊತ್ತು ಸಾಗೋ ಕ್ಯಾಪ್ಟನ್ ಅಭಿಮನ್ಯುವಿಗೆ ಲಕ್ಷ್ಮೀ, ಹಿರಣ್ಯ ಕುಮ್ಕಿ ಆನೆಗಳಾಗಿ ಸಾಥ್ ನೀಡಿದ್ರೆ, ಧನಂಜಯ ನಿಶಾನೆ ಆನೆಯಾಗಲಿದ್ದಾನೆ. ಗೋಪಿ ನೌಪತ್ ಆನೆಯಾಗಲಿದ್ದು 9 ಆನೆಗಳು ದಸರಾ ಮೆರವಣಿಗೆಯಲ್ಲಿ ಸಾಗಲಿವೆ. 

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *