ಪಶುವೈದ್ಯಾಧಿಕಾರಿ ಹುದ್ದೆಗೆ ನೇಮಕಾತಿ: ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

0 0
Read Time:2 Minute, 26 Second

(Veterinary) ಪಶುಪಾಲನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಉದ್ಯೋಗ ಇಲಾಖೆ:
ಆಯುಕ್ತರವರ ಕಾರ್ಯಾಲಯ, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ, ಪಶುಪಾಲನಾ ಭವನ, ಸಿಬಿಐ ಕಚೇರಿ ಎದುರು, ಬೆಂಗಳೂರು.

ಹುದ್ದೆಯ ವಿವರ:
ಪಶು ವೈದ್ಯಾಧಿಕಾರಿ

ಹುದ್ದೆಯ ಸಂಖ್ಯೆ:
120

(Veterinary) ವಿದ್ಯಾರ್ಹತೆ:
* ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಅಥವಾ ಭಾರತದಲ್ಲಿ ಕಾನೂನು ಮೂಲಕ ಸ್ಥಾಫಿಸಲಾದ ಪಶು ವಿಶ್ವವಿದ್ಯಾಲಯ ಅಥವಾ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ.50 ಅಂಕಗಳೊಂದಿಗೆ ಬಿ.ವಿ.ಎಸ್‌.ಸಿ ಅಥವಾ ಬಿ.ವಿ.ಎಸ್‌.ಸಿ ಮತ್ತು ಎ.ಹೆಚ್ ಪದವಿ, ಇತರೆ ಸಂಬಂಧಿತ ಹೊಂದಿರಬೇಕು.
* ಭಾರತೀಯ ಪಶುವೈದ್ಯಕೀಯ ಪರಿಷತ್ತಿನ ಕಾಯ್ದೆ 1984 ರ ಅಡಿಯಲ್ಲಿ IVS ಅಥವಾ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನಲ್ಲಿ ನೋಂದಣಿಯಾಗಿರಬೇಕು.

ವಯೋಮಿತಿ:
* ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ

ವೇತನ:
52,640

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://karnemaka.kar.nic.in/second_ahv/ ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ವಿಧಾನ:
ಅಭ್ಯರ್ಥಿಗಳ ಆಯ್ಕೆಯನ್ನು ಬಿ.ವಿಎಸ್ಸಿ / ಬಿ.ವಿ.ಎಸ್ಸಿ ಅಂಡ್‌ ಎ.ಹೆಚ್ ಪದವಿಯಲ್ಲಿ ಎಲ್ಲಾ ವರ್ಷಗಳಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳ ಅರ್ಹತೆ ಆಧಾರದ ಮೇಲೆ ಹಾಗೂ ಸರ್ಕಾರದ ಮೀಸಲಾತಿಗೆ ಅನುಗುಣವಾಗಿ ನಡೆಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
25-12-2024 ರ ರಾತ್ರಿ 11-59 ರವರೆಗೆ

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *