
Read Time:1 Minute, 6 Second
ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್‌ನ 51ನೇಯ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಖನ್ನಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದಾರೆ.


ಡಿ.ವೈ. ಚಂದ್ರಚೂಡ್ ಅವರು ಸಿಜೆಐ ಹುದ್ದೆಯಿಂದ ಭಾನುವಾರ ನಿವೃತ್ತರಾಗಿದ್ದಾರೆ. ಖನ್ನಾ ಅವರು 2025ರ ಮೇ 13ರವರೆಗೆ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಪಡಿಸಿದ ತೀರ್ಪು, ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಕ್ರಮವನ್ನು ಎತ್ತಿಹಿಡಿದ ತೀರ್ಪು ಸೇರಿದಂತೆ ಸುಪ್ರೀಂ ಕೋರ್ಟ್ ನೀಡಿದ ಹಲವು ಮಹತ್ವದ ತೀರ್ಪುಗಳಲ್ಲಿ ಖನ್ನಾ ಅವರ ಪಾಲು ಕೂಡ ಇದೆ.