ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಪ್ರದರ್ಶನ ಕಡ್ಡಾಯ..!

0 0
Read Time:1 Minute, 40 Second

 ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ.

ಆದುದರಿಂದ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ಸೂಚಿಸಿದೆ.

ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇಕಡ 60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇಕಡ 40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *