
Read Time:1 Minute, 18 Second
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರಿನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂರು ಕಾರುಗಳು ಜಖಂಗೊಂಡಿವೆ. ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಕಾರು ಹೆದ್ದಾರಿಯಲ್ಲಿ ನಿಂತಿದ್ದ ನೀರಿನಲ್ಲಿ ತೇಲಾಡಿದಂತಾಗಿ, ಚಾಲಕನ ನಿಯಂತ್ರಣ ತಪ್ಪಿ ಮುಂಭಾಗದಲ್ಲಿ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಆ ಕಾರು ಮುಂದಕ್ಕೆ ಚಲಿಸಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಹೆದ್ದಾರಿ ಬದಿಯ ಪೊದೆಗೆ ಹೋಗಿದ್ದು, ಮತ್ತೊಂದು ಕಾರು ರಸ್ತೆ ಬದಿಯಲ್ಲಿ ನಿಂತಿದೆ. ಈ ವೇಳೆ ಒಂದು ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಚಲಿಸಿದೆ. ಮೂರೂ ಕಾರುಗಳಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಅಸ್ತವ್ಯಸ್ತಗೊಂಡಿದ್ದ ವಾಹನ ಸಂಚಾರವನ್ನು ಸುಗಮಗೊಳಿಸಿದ್ದಾರೆ.

