
Read Time:53 Second
ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಪೊಲೀಸ್ ಠಾಣೆಯ ಉಪ ನಿರೀಕ್ಷಕ ಅಬ್ದುಲ್ ಖಾದರ್ ಅವರನ್ನು ಅಮಾನತು ಮಾಡಲಾಗಿದೆ.



ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಮರಳು ದಂಧೆಕೋರರೊಂದಿಗೆ ಪಿಎಸ್‌ಐ ಅಬ್ದುಲ್ ಖಾದರ್ ಸಹಕರಿಸಿದ್ದಾರೆ ಎನ್ನುವುದನ್ನು ತಿಳಿಸುವ ಆಡಿಯೋವೊಂದರ ಬಗ್ಗೆ ಮೇಲಧಿಕಾರಿಗಳಿಗೆ ದೂರು ನೀಡಲಾಗಿತ್ತು. ಪ್ರಾಥಮಿಕ ತನಿಖೆ ನಡೆಸಿದ ವೇಳೆ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.
