ಕನ್ನಡಿಗರಿಗೆ ಕಡ್ಡಾಯ ಉದ್ಯೋಗ: ನಾಳೆ ರಾಜ್ಯಾದ್ಯಂತ ‘ಕರವೇ’ ಬೃಹತ್ ಪ್ರತಿಭಟನೆ

0 0
Read Time:1 Minute, 45 Second

ಬೆಂಗಳೂರು : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದು, ಕಡ್ಡಾಯವಾಗಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ.

ಹೌದು ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು‌ ಆಗ್ರಹಿಸಿ ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ.

ಅಲ್ಲದೆ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಕೂಡ ಆಗ್ರಹ ಕೇಳಿಬಂದಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದೆಗಳಲ್ಲಿ ಶೇಕಡಾ 100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್​ಗಳಲ್ಲಿ ಶೇಕಡಾ 80 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *