
Read Time:1 Minute, 16 Second
ಉಡುಪಿ: ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ.


ಮೃತರನ್ನು ಸುರೇಶ್ ಆಚಾರ್ಯ (36 ವ), ಮಕ್ಕಳಾದ ಸುಮೀಕ್ಷಾ (7 ವ) ಸುಶ್ಮಿತಾ (5 ವ), ಸುಶಾಂತ್ (2 ವ) ಎಂದು ಗುರುತಿಸಲಾಗಿದೆ. ಸುರೇಶ್ ಆಚಾರ್ಯ ಅವರ ಪತ್ನಿ ಮೀನಾಕ್ಷಿ (32 ವ) ಗಂಭೀರ ಗಾಯಗೊಂಡಿದ್ದು, ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಿಮಣೇಲು ಗಾಂಧಿನಗರ ನಿವಾಸಿ ಸೀತರಾಮ ಆಚಾರ್ಯ ರವರ ಕುಟುಂಬಿಕರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

