
ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಗೀತಾ ಪಾಂಗಳರವರ ಅಧ್ಯಕ್ಷತೆಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಹಾಗೂ ತಾಲೂಕು ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರೆಲ್ಲರೂ 9 ಬಣ್ಣದ ಸೀರೆಯನ್ನುಟ್ಟು ಉಡುಪಿ ಜಿಲ್ಲಾ ಕಛೇರಿಯಲ್ಲಿ ನವರಾತ್ರಿ ಹಬ್ಬ ಆಚರಿಸಿದರು.


ಉಡುಪಿಗೆ ಪ್ರವಾಸಕ್ಕೆಂದು ಆಗಮಿಸಿದ ಬೆಂಗಳೂರು ರಾಜ್ಯದ ಪತ್ರಿಕಾ ಕಾರ್ಯದರ್ಶಿಯಾದ ಗೋಮೂರ್ತಿ ಯಾದವ್, ಬೆಂಗಳೂರು ನಗರ ಉಪಾಧ್ಯಕ್ಷರಾದ ಗಂಗಾಧರ್, ಬೆಂಗಳೂರು ಕರವೇ ಮುಖಂಡರಾದ ಮೇಘನಾಥ್ ದಾಸ್, ಸುಭಾಷ್ ಶೆಟ್ಟಿ, ಗೌರಿಶಂಕರ್ ಇವರನ್ನು ಉಡುಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರು ಶಾಲು ಹೋದಿಸಿ ಸ್ವಾಗತಿಸಿದರು.
ಉಡುಪಿ ಜಿಲ್ಲಾ ಮಹಿಳಾ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು ಸೇರಿ ಸ್ವಾಗತಿಸಿದರು. ಸಭೆಯನ್ನುದ್ದೇಶಿಸಿ ಮಾತಾಡಿದಂತಹ ರಾಜ್ಯದ ಪತ್ರಿಕಾ ಕಾರ್ಯದರ್ಶಿಯಾದ ಗೋಮೂರ್ತಿ ಯಾದವ್ ರವರು ಮೊದಲಿಗೆ ಮಹಿಳೆಯರಿಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದರು. ಉಡುಪಿ ಜಿಲ್ಲೆಯಲ್ಲಿ ಪುರುಷ ಮತ್ತು ಮಹಿಳೆಯರು ಒಟ್ಟಾಗಿ ಬಹು ದೊಡ್ಡ ಮಟ್ಟದಲ್ಲಿ ಸಂಘಟನೆಯನ್ನು ಬಲಗೊಳಿಸಬೇಕು. ಎಲ್ಲರೂ ಸೇರಿ ಸಂಘಟನೆಯಲ್ಲಿ ಕೆಲಸ ಕಾರ್ಯಗಳಲ್ಲಿ ಕೈಜೋಡಿಸಬೇಕು ಎಂದು ಜಿಲ್ಲಾಧ್ಯಕ್ಷರು ಸಭೆಯಲ್ಲಿ ಹೇಳಿದರು.


ಈ ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ಕುಲಾಲ್, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾದ ಕೃಷ್ಣಕುಮಾರ್, ಜಿಲ್ಲಾ ಮಹಿಳಾ ಉಪಾಧ್ಯಕ್ಷರಾದ ದೇವಕಿ ಬಾರ್ಕೂರ್, ಶಾಲಿನಿ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ಜ್ಯೋತಿ, ಜಿಲ್ಲಾ ಸಹ ಸಂಘಟನಾ ಕಾರ್ಯದರ್ಶಿಯಾದ ವಿಶಾಲ ಕಾಪು ತಾಲೂಕು ಮಹಿಳಾ ಅಧ್ಯಕ್ಷರಾದ ಶಶಿಕಲ, ಕಾಪು ಮಹಿಳಾ ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಶಾಲಿನಿ ಸುರೇಂದ್ರ, ಜಿಲ್ಲಾ ಮಹಿಳಾ ಸದಸ್ಯರಾದ ಶೋಭಾ, ಸರೋಜಾ ಮೊದಲಾದವರು ಉಪಸ್ಥಿತರಿದ್ದರು
