
ಮಂಗಳೂರು : ಇತಿಹಾಸ ಪ್ರಸಿದ್ಧ ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರದಲ್ಲಿ ವರ್ಷಂಪ್ರತಿಯಂತೆ ಆಚರಿಸುತ್ತಿರುವ ಕಾರ್ತಿಕ ದೀಪೋತ್ಸವದ ಉತ್ಸವವನ್ನು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನವೆಂಬರ್ 15ರ ಶುಕ್ರವಾರದಂದು ಅದ್ದೂರಿಯಾಗಿ ಆಚರಿಸಲಾಯಿತು.




ಬೆಳಗ್ಗೆ 9.30 ಯಿಂದ ಕಾರ್ತಿಕ ಮಾಸದ ಹುಣ್ಣಿಮೆಯ ಈ ವಿಶೇಷ ದಿನದಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ನಂತರ ಶ್ರೀ ದೇವರಿಗೆ ನವಕ ಕಲಶ, ಪ್ರಧಾನ ಗಣಹೋಮ, ನಾಗ ತಂಬಿಲ, ದೈವಗಳಿಗೆ ಪರ್ವಸೇವೆ ನಡೆಯಿತು. ನಂತರ ಸಾರ್ವಜನಿಕ ಅನ್ನಸಂತರ್ಪಣೆಯೂ ನಡೆಯಿತು.


ನಂತರ ಮಧ್ಯಾಹ್ನ 2-00 ರಿಂದ ದೇವಳದಲ್ಲಿ ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ಸಂಜೆ 6.30 ಯಿಂದ ಶ್ರೀ ಮಹಾಗಣಪತಿ ಹಾಗೂ ಶ್ರೀ ವೀರನಾರಾಯಣ ದೇವರಿಗೆ ರಂಗಪೂಜೆಯು ಜರಗಿತು. ತದನಂತರ ಭಕ್ತರಿಂದ ಸಾಮೂಹಿಕ ದೀಪಾರಾಧನೋತ್ಸವ ನಡೆದು ಶ್ರೀ ದೇವರ ವಿಶೇಷ ಬಲಿ ಉತ್ಸವ ನಡೆಯಿತು. ನಂತರ ಶ್ರೀದೇವರಿಗೆ ಮಹಾಪೂಜೆ ನಡೆದು, ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಸರ್ವ ಭಕ್ತಾಧಿಗಳು ಉಪಸ್ಥಿತರಿದ್ದರು.




ವರದಿ : ಧನುಷ್ ಶಕ್ತಿನಗರ
