ವಿಧಾನ ಪರಿಷತ್ ಉಪಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯಭೇರಿ

0 0
Read Time:2 Minute, 22 Second

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1,697 ಮತಗಳ ಅಂತರದಿಂದ ಜಯ ಸಾಧಿಸಿದರು.

ಕಿಶೋರ್ ಅವರು 3,654 ಮತ ಪಡೆದು ಗೆಲುವಿನ ನಗೆ ಬೀರಿದರು.

1,957 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಎಸ್‌ಡಿಪಿಐನ ಅನ್ವರ್ ಸಾದತ್ 195 ಮತ ಪಡೆದರು. ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಗಳಿಸಿರು. ಒಟ್ಟು 87 ಮತಗಳು ತಿರಸ್ಕೃತವಾಗಿದ್ದವು.

ಈ ಕ್ಷೇತ್ರದಲ್ಲಿ 5,906 ಮತಗಳು ಚಲಾವಣೆಯಾಗಿದ್ದು, 5,819 ಸಿಂಧು ಮತಗಳಿದ್ದವು‌. ಮತ ಎಣಿಕೆ ಇಲ್ಲಿನ ಕೊಡಿಯಾಲ್ ಬೈಲಿನ ಸೇಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು.

ಕಿಶೋರ್ ಗೆಲುವು ಸಾಧಿಸುತ್ತಿದ್ದಂತೆಯೇ ಪಿವಿಎಸ್ ವೃತ್ತದ ಬಳಿ ಇರುವ ಬಿಜೆಪಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರ ಸಮ್ಮುಖದಲ್ಲಿ ಮತ ಎಣಿಕೆ ನಡೆಯಿತು.

ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಆ ಸ್ಥಾನ ಭರ್ತಿಗಾಗಿ ಉಪ ಚುನಾವಣೆ ನಡೆದಿದೆ. 2024 ರ ಅ.21ರಂದು ಮತದಾನ ನಡೆದಿತ್ತು.

ಕಳೆದ (2021ರ ಡಿಸೆಂಬರ್ 10 ರಂದು) ಚುನಾವಣೆಯಲ್ಲಿ 6,012 ಮತ ಚಲಾವಣೆಯಾಗಿದ್ದು, 5,955 ಮತಗಳು ಸಿಂಧುವಾಗಿದ್ದವು. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, 3672, ಮಂಜುನಾಥ ಭಂಡಾರಿ 2079, ಎಸ್ಪಿಪಿಐ ಅಭ್ಯರ್ಥಿ 204 ಮತ ಪಡೆದಿದ್ದರು. ಕೋಟ ಶ್ರೀನಿವಾಸ ಪೂಜಾರಿ 1593 ಮತಗಳ ಅಂತರದಿಂದ ಗೆದ್ದಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *