
Read Time:1 Minute, 3 Second
ವಿಟ್ಲ: ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಓಮ್ನಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಮ್ನಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.



ಗಾಯಾಳುಗಳನ್ನ ಮೋನಪ್ಪ ಕುಲಾಲ್ ಮೈರ, ಪತ್ನಿ ಲಲಿತಾ ಮತ್ತು ರಮಣಿ ಎಂದು ಗುರುತಿಸಲಾಗಿದೆ.
ವಿಟ್ಲದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಪಕಳಕುಂಜದಿಂದ ವಿಟ್ಲ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಮುಳಿಯ ಎಂಬಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಓಮ್ನಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಳುಗಳನ್ನು ತಕ್ಷಣ ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.


ವಿಟ್ಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.


