
Read Time:1 Minute, 17 Second
ವಿಟ್ಲ: ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ KSRTC ಬಸ್ಸು ಮತ್ತು ಓಮ್ನಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಮ್ನಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.



ವಿಟ್ಲದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಪಕಳಕುಂಜದಿಂದ ವಿಟ್ಲ ಕಡೆಗೆ ಬರುತ್ತಿದ್ದ KSRTC ಬಸ್ಸು ಮುಳಿಯ ಎಂಬಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಓಮ್ನಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದು ಓಮ್ನಿ ಚಾಲಕ ಮೋನಪ್ಪ ಕುಲಾಲ್ ಮೈರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೋನಪ್ಪ ಕುಲಾಲ್ ರವರ ಮೃತದೇಹ ವಿಟ್ಲ ಸಮುದಾಯ ಆಸ್ಪತ್ರೆಯಲ್ಲಿಟ್ಟಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಉಳಿದ ಇಬ್ಬರು ಗಾಯಳುಗಳಾದ ಪತ್ನಿ ಲಲಿತಾ ಮತ್ತು ರಮಣಿಯವರನ್ನು ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.


ವಿಟ್ಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತಿದ್ದಾರೆ.


