
ಕುಲಾಲ ಸಂಘ ಮೂಡಬಿದ್ರೆ ಇದರ 19 ನೇ ವಾರ್ಷಿಕ ಮಹಾಸಭೆ,ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ- ಸನ್ಮಾನ ಕಾರ್ಯಕ್ರಮವು ಮೂಡಬಿದ್ರೆ ವಿದ್ಯಾಗಿರಿಯಲ್ಲಿ ಶ್ರೀ ಸತೀಶ್ ಕುಲಾಲ್ ರವರ ಅಧ್ಯಕ್ಷತೆ ಯಲ್ಲಿ ನಡೆಯಿತು.




ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸತೀಶ್ ಕುಲಾಲ್ ಮೂಡಬಿದಿರೆ ವಹಿಸಿದರು.
ನಿವೃತ್ತ ಪಂ. ಅಭಿವೃದ್ಧಿ ಅಧಿಕಾರಯಾದ ಬಿ.ಉಗ್ಗಪ್ಪ ಮೂಲ್ಯ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಧನಂಜಯ ಕುಲಾಲ್, ಬಾಲಕೃಷ್ಣ ಕುಲಾಲ್, ಶಂಕರ್ ಕುಲಾಲ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಯನ್ ಅನಿಲ್ ದಾಸ್ ಇವರನ್ನು ಮೂಡಬಿದ್ರೆ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಗೌರವಿಸಿ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಲಯನ್ ಅನಿಲ್ ದಾಸ್ ರವರು ಸಮಾಜದ ಅಭಿವೃದ್ಧಿಗೆ ನಾವೆಲ್ಲರೂ ಸಂಘಟನಾತ್ಮಕವಾಗಿ ತೊಡಗಿಸಿಕೊಳ್ಳಲು ಸಂಘದ ಚಟುವಟಿಕೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹಾಗೂ ಹಿರಿಯರು ಕಟ್ಟಿ ಬೆಳೆಸಿದ ಸಂಘವನ್ನು ಇನ್ನಷ್ಟು ಸದೃಢವಾಗಿ ಮುನ್ನಡೆಸಬೇಕು ಎಂದು ಕಿವಿ ಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಜ. 4, 2026ರಂದು ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾಯ೯ಕ್ರಮದ ಆಮಂತ್ರಣ ಪತ್ರಿಕೆಯನ್ನು ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್‌ನ ಲ. ಅನಿಲ್‌ದಾಸ್ ರವರು ಮೂಡಬಿದಿರೆಯ ಕುಲಾಲ ಸಂಘದ ಅಧ್ಯಕ್ಷರಿಗೆ ಹಾಗೂ ಸರ್ವ ಸದಸ್ಯರಿಗೆ ನೀಡಿ ಆಹ್ವಾನಿಸಿದರು.

