
Read Time:49 Second
ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಈ ವೇಳೆ ಸಂಸದರಾಗಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರ ಸ್ವಾಮಿ, ವಿ.ಸೋಮಣ್ಣ ಹಾಗೂ ಪ್ರಹ್ಲಾದ್ ಜೋಶಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.


ಅಧಿವೇಶನದ ಮೊದಲ ದಿನವಾದ ಇಂದು, ಸಂಸದರಾಗಿ ಎಲ್ಲಾ ನೂತನ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು.
ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಹಾಗೂ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ ಸೇರಿ ಕರ್ನಾಟಕದ ಇತರ ಸಂಸದರೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

