ಮಂಗಳೂರು-ಸಿಂಗಾಪುರ ನೇರ ವಿಮಾನ ಯಾನ

0 0
Read Time:1 Minute, 48 Second

ಮಂಗಳೂರು : ಹೊಸ ವರ್ಷದ ಕೊಡುಗೆ ಎಂಬಂತೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ ಯಾನ 2025ರ ಜನವರಿ 21 ರಿಂದ ಶುರುವಾಗಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಕಂಪೆನಿ ಈ ವಿಮಾನ ಹಾರಾಟ ಆರಂಭಿಸಲು ಮುಂದೆ ಬಂದಿದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಐಎಕ್ಸ್ 862 ವಿಮಾನ 5.55 ಕ್ಕೆ ಹೊರಟು 13.25 ಕ್ಕೆ ಸಿಂಗಾಪುರ ತಲಪುತ್ತದೆ. ಮರು ಪ್ರಯಾಣದಲ್ಲಿ ಐಎಕ್ಸ್ 861 ವಿಮಾನ ಸಿಂಗಾಪುರದಿಂದ 14.25 ಕ್ಕೆ ಹೊರಟು 16.55 ಕ್ಕೆ ಮಂಗಳೂರು ತಲಪುವುದು.

2025ರ ಜ.21ರಿಂದ ಸಿಂಗಾಪುರಕ್ಕೆ ವಿಮಾನ :

ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು 2024 ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ ಮನವಿ ಸಲ್ಲಿಸಿದ್ದರು. ಫೆ.1 ರಿಂದ ದಿಲ್ಲಿಗೆ ದಿನನಿತ್ಯ ವಿಮಾನ ಸೌಲಭ್ಯಏರ್ ಇಂಡಿಯಾ ಎಕ್ಸ್‌ಪ್ರೆಸ್ ಫೆಬ್ರವರಿ 1, 2025 ರಿಂದ ಮಂಗಳೂರು ಮತ್ತು ರಾಜಧಾನಿ ದಿಲ್ಲಿ ನಡುವೆ ದೈನಂದಿನ ತಡೆರಹಿತ ವಿಮಾನ ಹಾರಾಟ ಸೌಲಭ್ಯವನ್ನು ಆರಂಭಿಸಲಿದೆ ಎಂದು ಪ್ರಕಟನೆ ತಿಳಿಸಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *