ಮಂಗಳೂರಿನ ಸಮಾಜ ಸೇವಕನಿಗೆ ಅವಮಾನ! ಸುವರ್ಣ ಮಹೋತ್ಸವ ಪ್ರಶಸ್ತಿಗೆಂದು ಕರೆಸಿ, ಬರಿಗೈಲಿ ವಾಪಸ್

0 0
Read Time:2 Minute, 13 Second

ಬೆಂಗಳೂರು: ರಾಜ್ಯ ಸರ್ಕಾರದ ಎಡವಟ್ಟಿನಿಂದ ಸುವರ್ಣ ಮಹೋತ್ಸವ ಪ್ರಶಸ್ತಿಗಾಗಿ ಬಂದು ಸಮಾಜ ಸೇವಕರೋರ್ವರು ಬರಿಗೈಲಿ ವಾಪಸ್ ಆದ ಘಟನೆ ಜರುಗಿದೆ.

ಸುವರ್ಣ ಮಹೋತ್ಸವ ಪ್ರಶಸ್ತಿಯಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಶಸ್ತಿಗೆ ಆಯ್ಕೆಯಾಗಿದ್ದೀರಿ ಎಂದು ಮಂಗಳೂರಿನ ಸಮಾಜ ಸೇವಕರೊಬ್ಬರಿಗೆ ಫೋನ್ ಕರೆ ಮಾಡಿ ಬೆಂಗಳೂರಿಗೆ ಕರೆಸಿಕೊಂಡಿದೆ. ಇನ್ನೇನು ಪ್ರಶಸ್ತಿ ಸ್ವೀಕರಿಸಲು ಹೋಗಬೇಕು ಎನ್ನುವಷ್ಟರಲ್ಲಿ ನಿಮಗೆ ಪ್ರಶಸ್ತಿ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಮೂಲಕ ಮಂಗಳೂರಿನ ಸಮಾಜ ಸೇವಕ ಬಾಬು ಪಿಲಾರ್ ಅವಮಾನ ಮಾಡಿದ್ದಾರೆ.

ಖುದ್ದು ಇಲಾಖೆ ಅಧಿಕಾರಿ ನೀಲಮ್ಮ ಎನ್ನುವರು ನಿಮ್ಮನ್ನು ಸುವರ್ಣ ಮಹೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮಂಗಳೂರಿನಿಂದ ಬೆಂಗಳೂರಿಗೆ ಕರೆಯಿಸಿಕೊಂಡಿದ್ದಾರೆ. ಅಲ್ಲದೇ ಕುಮಾರಕೃಪಾ ಅತಿಥಿ ಗೃಹದಲ್ಲಿ ಅತಿಥ್ಯ ನೀಡಿ ಕೊನೆ ಕ್ಷಣದಲ್ಲಿ ನೀವು ಅವರಲ್ಲ. ನಿಮಗೆ ಪ್ರಶಸ್ತಿ ಬಂದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಮಂಗಳೂರಿನಿಂದ ಬೆಂಗಳೂರಿಗೆ ಬಂದಿರುವ ಸಮಾಜ ಸೇವಕ ಬಾಬು ಪಿಲಾರ್ ಕಂಗಾಲಾಗಿದ್ದಾರೆ.

ಸುವರ್ಣ ಮಹೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಸಂಕೀರ್ಣ ವಿಭಾಗದಲ್ಲಿ ಬಾಬು ಕಿಲಾರ್ ಹೆಸರು ಘೋಷಣೆಯಾಗಿತ್ತು. ಅದು ಬಾಬು ಪಿಲಾರ್ ರದ್ದೇ ಎಂದು ಬಾಬು ಪಿಲಾರ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ನೀಲಮ್ಮ ನಿನ್ನೆ ಕರೆ ಮಾಡಿ ಬೆಂಗಳೂರು ಬರ ಹೇಳಿದ್ದರು. ಕೊಠಡಿ ಕೂಡ ಕೊಟ್ಟು ಇಂದು ಪ್ರಶಸ್ತಿ ಸ್ವೀಕರಿಸಲು ಮಾಹಿತಿ ನೀಡಿದ್ದರು. ಆದರೆ ಕುಮಾರ ಕೃಪಾ ಬಳಿ ಬಸ್ ಹತ್ತುವ ವೇಳೆ ನಿಮಗೆ ಪ್ರಶಸ್ತಿ ಇಲ್ಲ. ಮತ್ತೊಬ್ಬರು ಬಾಬು ಕಿಲಾರ್​ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *