
Read Time:1 Minute, 18 Second
ಮಂಗಳೂರು: ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಮಸಾಜ್ ಪಾರ್ಲರ್ ಒಂದರ ಮೇಲೆ ರಾಮ್ ಸೇನಾ ಕರ್ನಾಟಕದ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಪ್ರಸಾದ್ ಅತ್ತಾವರ ನೇತೃತ್ವದ ಕಲರ್ಸ್ ಎಂಬ ಮಸಾಜ್ ಸೆಂಟರ್‌ಗೆ ರಾಮ ಸೇನಾ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಈ ವೇಳೆ ಮಸಾಜ್ ಸೆಂಟರ್ ನಲ್ಲಿದ್ದ ಪಿಠೋಪಕರಣಗಳನ್ನು ಹಾನಿ ಮಾಡಿದ್ದಾರೆ. ಮಸಾಜ್ ಸೆಂಟರ್ ನ ಗಾಜುಗಳನ್ನು ಪುಡಿಗೈದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾಳಿ ವೇಳೆ, ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್‍ನಲ್ಲಿ ಇದ್ದರು. ಈ ವೇಳೆ ವ್ಯಕ್ತಿಯ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ನಗರದಾದ್ಯಂತ ಇರುವ ಮಸಾಜ್ ಸೆಂಟರ್‍ಗಳನ್ನು ಮುಚ್ಚುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಮಂಗಳೂರು ನಗರದಾದ್ಯಂತ ಇರೋ ಮಸಾಜ್ ಸೆಂಟರ್ ಗಳ ಮುಚ್ಚುವಂತೆ ರಾಮ ಸೇನಾ ಆಗ್ರಹಿಸಿದೆ.

