ಉಪ್ಪಿನಂಗಡಿ: ಕಳ್ಳತನ ಪ್ರಕರಣ- ಗರುಡ ಗ್ಯಾಂಗ್ ನಟೋರಿಯಸ್ ಸದಸ್ಯನ ಬಂಧನ

0 0
Read Time:2 Minute, 47 Second

ಉಪ್ಪಿನಂಗಡಿ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಗರುಡ ಗ್ಯಾಂಗ್‌ನ ಸದಸ್ಯ ಹಾಗೂ ಅಂತರ್ ಜಿಲ್ಲಾ ಕಳ್ಳತನ ಪ್ರಕರಣಗಳ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಆ. 27ರಂದು ಬಂಧಿಸಿದ್ದಾರೆ.

ಕಡಬ ತಾಲೂಕು ಐತ್ತೂರು ಗ್ರಾಮದ ಕಾಯರ್ತಡ್ಕ ನಿವಾಸಿ ಝಕಾರಿಯಾ ಎಂಬವರ ಪುತ್ರ ಅಬ್ದುಲ್ ಹಮೀದ್ (27) ಬಂಧಿತ ಆರೋಪಿ. 2023ರ ಅಕ್ಟೋಬರ್ 10ರಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಉಪಯೋಗಿಸುವ ಕೆ.ಎನ್.ಆರ್. ಸಂಸ್ಥೆಯ ಕಬ್ಬಿಣದ ಶೀಟ್‌ಗಳನ್ನು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಈತ ಒಪ್ಪಿಕೊಂಡಿದ್ದಾನೆ.

ಅಲ್ಲದೇ ಈತನ ಮೇಲೆ ಮಂಗಳೂರು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಚೋದನೆ, ದಾವಣಗೆರೆ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ, ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದವಾಗಿ ಸಿಲುಕಿದ ಪ್ರಕರಣ, ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಕಳವು ಪ್ರಕರಣ, ಕಡಬ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಕಳವು ಪ್ರಕರಣ, ಬೆಂಗಳೂರು ಕೊತ್ನಲೂರು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 41(ಎ)ಮ 102 ಸಿಆರ್. ಪಿಸಿ ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದಾನೆ. ಈ ಎಲ್ಲಾ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಈತನ ಮೇಲೆ ದಸ್ತಗಿರಿ ವಾರಂಟ್ ಜಾರಿಯಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನಿರ್ದೇಶನದಂತೆ ನಡೆದ ಈ ಪತ್ತೆ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕ (ತನಿಖೆ- 1) ರುಕ್ಮಾ ನಾಯ್ಕ, ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹಿತೋಶ್, ಪೊಲೀಸ್ ಸಿಬ್ಬಂದಿಗಳಾದ ಹೇಮರಾಜ್, ಗಿರೀಶ್ ರೈ, ಶಿವರಾಜ್ ಟಕ್ಕಳಿಕೆ, ಕಡಬ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ ಭಾಗವಹಿಸಿದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *