ಸಚಿವ ಬಿ.ನಾಗೇಂದ್ರಗೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಸೂಚನೆ..!

0 0
Read Time:2 Minute, 3 Second

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 87 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಟಿ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಡುವೆ ಸರ್ಕಾರಕ್ಕೆ ಮುಖಭಂಗ ಅನುಭವಿಸ ಬಾರದು ಎನ್ನುವ ನಿಟ್ಟಿನಲ್ಲಿ, ಜೊತೆಗೆ ಮುಂದಿನ ತಿಂಗಳು ಮುಂಗಾರು ಅಧಿವೇಶನದಲ್ಲಿ ಈ ಬಗ್ಗೆ ಯಾವುದೇ ಕಾರಣಕ್ಕೆ ಇಕ್ಕಟ್ಟಿಗೆ ಸಿಲುಕದ ಹಾಗೇ ನೋಡಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇಂದು ಸಂಜೆ ಗೃಹ ಸಚಿವಲಾಯ ವರದಿಯನ್ನು ಆಧಾರಿಸಿ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಇದಲ್ಲದೇ ತಾವೇ ಖುದ್ದು ಈ ಬಗ್ಗೆ ಹೇಳಿಕೆ ನೀಡುವಂತೆ ಸಿಎಂ ನಾಗೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಶಿವಮೊಗ್ಗ ಅಧೀಕ್ಷಕ ಚಂದ್ರಶೇಖರ್ ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಅವರು ಸುದೀರ್ಘ ಡೆತ್ ನೋಟ್ ಬರೆದಿಟ್ಟಿದ್ದರು.

ವಾಲ್ಮೀಕಿ ನಿಗಮದಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಚಂದ್ರಶೇಖರನ್ 5 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ಎಂಡಿ ಜೆ.ಜಿ. ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣನವರ್, ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶುಚಿಸ್ಮಿತಾ ರವುಲ್ ಎಂಬುವರ ಪಾತ್ರವಿದೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *