ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ – ಮಾಲಕನಿಗೆ 25,000 ರೂ. ದಂಡ

0 0
Read Time:1 Minute, 12 Second

ಮಂಗಳೂರು: ಅಪ್ರಾಪ್ತ ಬಾಲಕ ಸ್ಕೂಟರ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಆರೋಪದಡಿ ಸ್ಕೂಟರ್ ಮಾಲಕನಿಗೆ ನ್ಯಾಯಾಲಯದ ದಂಡ ವಿಧಿಸಿದೆ.

ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಪದವು ಬಳಿ 2025ರ ಮಾ.30ರಂದು ಮುಂಜಾವ 3:50ರ ವೇಳೆಗೆ ಅಪ್ರಾಪ್ತ ಬಾಲಕ ಸ್ಕೂಟರ್‌ನಲ್ಲಿ ತೆರಳುತ್ತಿದ್ದ. ಆ ವೇಳೆ ಅದೇ ದಿಕ್ಕಿನಲ್ಲಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಾಲಕ ಢಿಕ್ಕಿ ಹೊಡೆದಿದ್ದು, ಇದರಿಂದ ಎರಡೂ ವಾಹನದಲ್ಲಿದ್ದವರು ಗಾಯಗೊಂಡಿದ್ದರು.

ಈ ಬಗ್ಗೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಎಸ್‌ ಐ ರೋಸಮ್ಮ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜೆಎಂಎಫ್‌ಸಿ ಎಂಟನೇ ನ್ಯಾಯಾಲಯದ ನ್ಯಾಯಾಧೀಶ ಫವಾಝ್ ಪಿ.ಎ. ಅವರು ಅಪ್ರಾಪ್ತನಿಗೆ ಚಲಾಯಿಸಲು ಸ್ಕೂಟರ್ ನೀಡಿದ ಮಾಲಕ ಅಬ್ದುಲ್ ಹಮೀದ್‌ಗೆ 25,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *