
Read Time:58 Second
ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಿಯ್ಯಾರಿನಲ್ಲಿ ಸಂಭವಿಸಿದೆ. ಗುಲಾಬಿ (63) ನೇಣಿಗೆ ಶರಣಾದವರು. ಕಳೆದ ಒಂದು ವರ್ಷದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಸ್ವಸ್ಥೆಯಿಂದ ಜಿಗುಪ್ಸೆ ಬಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಜು.27ರಂದು ರಾತ್ರಿ 11.30 ರಿಂದ ಜು.28ರ ಬೆಳಿಗ್ಗೆ 6 ಗಂಟೆಯ ನಡುವೆ ಕುಂಟಿಬೈಲು ಪೊಸರುಗುಟ್ಟೆಯಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

