
Read Time:1 Minute, 8 Second
ಮೊಬೈಲ್ ಗೇಮ್ ಆಡಿದ್ದಕ್ಕಾಗಿ ಅಕ್ಕ ಗದರಿದ್ದಕ್ಕೆ ಮನನೊಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಆದರ್ಶ ನಗರದಲ್ಲಿ ನಡೆದಿದೆ.


ಆದರ್ಶ್ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆದರ್ಶ್ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತನ್ನ ಅಧ್ಯಯನವನ್ನು ನಿರ್ಲಕ್ಷಿಸಿ ಮೊಬೈಲ್ ಗೇಮ್ ಆಡಿದ್ದಕ್ಕೆ ಅಕ್ಕ-ತಮ್ಮನ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಅಕ್ಕ ತಮ್ಮನನ್ನು ಗದರಿದ್ದಾಳೆ. ಇದರಿಂದ ಮನನೊಂದ ಬಾಲಕ ಮನೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕೂಡಲೇ ಆದರ್ಶನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಷ್ಟು ಹೊತ್ತಿಗಾಗಲೇ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಸೆಕ್ಷನ್ 194ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

