
Read Time:51 Second
ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.


ಆರೋಪಿಯು ನಾವೂರು ಗ್ರಾಮ ಪಂಚಾಯತ್ ಸದಸ್ಯ ಮಹಮ್ಮದ್ ಯಾನೆ ಮೋನು ಎಂದು ತಿಳಿಯಲಾಗಿದೆ.
ಆರೋಪಿಯನ್ನು ಸ್ಥಳೀಯರು ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪುತ್ತೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ನಲ್ಲಿ ವಿದ್ಯಾರ್ಥಿನಿಗೆ ಆರೋಪಿ ಮೋನು ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ತಿಳಿದು ಬಂದಿದೆ.

ಬಂಟ್ವಾಳ ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.

