
Read Time:1 Minute, 5 Second
ಉಡುಪಿ: ಅನಂತನಗರದ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಅಕ್ರಮ ಪ್ರವೇಶಿಸಿ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯನ್ನು ಬಂದಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ.


ಬಂಧಿತನನ್ನು ಸ್ಥಳೀಯ ನಿವಾಸಿ ನವೀನ್ ನಾಯ್ಕ್ (25) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ವಶಕ್ಕೆ ಪಡೆದಿದ್ದಾರೆ.
ಆರೋಪಿ ಸೆ.1ರಂದು ನಸುಕಿನ ವೇಳೆ ವಸತಿ ನಿಲಯದ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಬಳಿಕ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಯೊಬ್ಬಳ ಕೈ ಎಳೆದು ಕಿರುಕುಳ ನೀಡಿ ಪರಾರಿಯಾಗಿದ್ದನು.


ಈ ಬಗ್ಗೆ ವಸತಿ ನಿಲಯದ ವಾರ್ಡನ್ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
