
Read Time:1 Minute, 6 Second
ಒಂದು ವೇಳೆ ಆರ್ಎಸ್ಎಸ್ ಇರದಿದ್ದರೇ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ ಶೆಟ್ಟರ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ಎಸ್ಎಸ್ ಬಗ್ಗೆ ಕೆಟ್ಟ ಭಾಷೆ ಬಳಕೆ ಮಾಡುತ್ತಿದ್ದಾರೆ. ಪ್ರಧಾನಿ ವಿರುದ್ಧ ಖರ್ಗೆ, ರಾಹುಲ್ ಗಾಂಧಿ ಈಗ ವಿಷಕಾರುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನೆಹರು ಅವರಿಂದ ಹಿಡಿದು ಇಂದಿರಾ ಗಾಂಧಿ, ರಾಹುಲ್ ಗಾಂಧಿ ಸೇರಿ ಅವರ ಕುಟುಂಬ ದೇಶಕ್ಕಾಗಿ ಯಾವುದೇ ಕೊಡುಗೆ ಇಲ್ಲ. ಬದಲಾಗಿ ಬರೀ ದೇಶವನ್ನು ಹಾಳು ಮಾಡಿದ್ದಾರೆ. ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಏನನ್ನೂ ಮಾಡಿಲ್ಲ ಎಂದು ಹೇಳಿದ್ದಾರೆ.

