
Read Time:1 Minute, 1 Second
ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಮೂಡುಬಿದ್ರೆ ತಾಲ್ಲೂಕು ವಾಲ್ಪಡಿ ಗ್ರಾಮದ ಉಮೇಶ್ ಶೆಟ್ಟಿ ಎಂಬಾತನನ್ನು ನ್ಯಾಯಾಲಯ ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.


ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿರುವುದು ಮಾತ್ರವಲ್ಲದೆ ಅತ್ಯಾಚಾರ ಮಾಡಿರುವ ಕಾರಣದಿಂದಾಗಿ ಬಾಲಕಿ ಗರ್ಭಿಣಿ ಆಗಿ ಮಗುವಿಗೆ ಜನ್ಮ ನೀಡಿದ ಆರೋಪ ಕೂಡ ದಾಖಲಾಗಿತ್ತು. ಈ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಆರೋಗ್ಯ ಮೇಲಿನ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಮಾನಿಸಿ ಆರೋಪಿಯನ್ನು ಪ್ರಕರಣದಿಂದ ಕುಲಾಸೆಗೊಳಿಸಲಾಗಿದೆ.