
ಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಮುಖಾಮುಖಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.
ವಿವಿಧ ಭದ್ರತಾ ಪಡೆಗಳ ಸಿಬ್ಬಂದಿಯ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಬೆಳಿಗ್ಗೆ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ. ಅವರೆಲ್ಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಗುಂಡಿನ ಚಕಮಕಿಯಲ್ಲಿ ರಾಜ್ಯ ಪೊಲೀಸ್ನ ಜಿಲ್ಲಾ ರಿಸರ್ವ್ ಗಾರ್ಡ್ಗೆ ಸೇರಿದ ಮತ್ತು ವಿಶೇಷ ಕಾರ್ಯಪಡೆಗೆ ಸೇರಿದ ಇಬ್ಬರು ಭದ್ರತಾ ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ. ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮೃತ ಭದ್ರತಾ ಸಿಬ್ಬಂದಿಯ ಶವಗಳನ್ನು ಹೊರತೆಗೆಯಲು ಮತ್ತು ಗಾಯಗೊಂಡ ಜವಾನರನ್ನು ಸ್ಥಳಾಂತರಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.