
Read Time:1 Minute, 24 Second
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಇಂದು ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.


ಇಂದು ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯ ಮಾಡುತ್ತಿವೆ.
ಬಿ.ನಾಗೇಂದ್ರ ಜೊತೆಗೆ ನಾನು, ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾತನಾಡಿದ್ದೇವೆ. ಅವರು ನಾನು ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರದಲ್ಲಿ ಭಾಗಿಯಾಗಿಲ್ಲ ಅಂತ ತಿಳಿಸಿದ್ದಾರೆ. ಹೀಗಾಗಿ ಸಚಿವ ನಾಗೇಂದ್ರ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದರು.


ಆದರೇ ಪಕ್ಷ ಹಾಗೂ ಹೈಕಮಾಂಡ್ ಘನತೆಗೆ ಧಕ್ಕೆ ಆಗಬಾರದು ಎಂಬ ನಿಲುವು ಬಿ.ನಾಗೇಂದ್ರ ಅವರದ್ದಾಗಿದೆ. ಈ ಹಿನ್ನಲೆಯಲ್ಲೇ ಅವರು ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಮುಂದಾಗಿದ್ದಾರೆ. ಇಂದು ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬಹುದು. ಹೈಕಮಾಂಡ್, ಸಿಎಂ ಜೊತೆಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂಬುದಾಗಿ ತಿಳಿಸಿದರು.
