
Read Time:51 Second
ಬೆಂಗಳೂರು: ಜಿಎಸ್‌ಟಿ ಇಳಿಕೆಯಿಂದಾಗಿ ಎಲ್ಲ ವಸ್ತುಗಳ ಬೆಲೆ ಇಳಿಕೆಯಾಗಿ ನಿರಾಳವಾಗಿದ್ದ ಜನತೆಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ನಂದಿನ ತುಪ್ಪದ ಬೆಲೆಯಲ್ಲಿ ಏಕಾಏಕಿ 90 ರೂ. ಏರಿಕೆ ಮಾಡಿ ದಿಢೀರ್ ಶಾಕ್ ಕೊಟ್ಟಿದೆ.


ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದೆ. ತುಪ್ಪ ಹೊರತುಪಡಿಸಿ ಇತರೇ ನಂದಿನಿ ಉತ್ಪನ್ನಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

