
Read Time:1 Minute, 18 Second
ಬೆಂಗಳೂರು ; ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಇದೀಗ ಮತ್ತೊಂದು ಶಾಕ್, ಕೆಎಂಪ್ ನಂದಿನಿ ಹಾಲು ದರವನ್ನು ಪ್ರತಿ ಲೀಟರ್ ಗೆ 1 ರಿಂದ 2 ರೂ.ವರೆಗೆ ಹೆಚ್ಚಳ ಮಾಡಲು ಸಿದ್ಧತೆ ನಡೆಸಲಾಗಿದೆ.


ನಂದಿನಿ ಹಾಲಿನ ದರವನ್ನು ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಪ್ರತಿ ಲೀಟರ್ ಹಾಳಿನ ದರವನ್ನು 1 ರಿಂದ 2 ರೂ.ವರೆಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹಾಲಿನ ದರ ಹೆಚ್ಚಳದ ಬಗ್ಗೆ ಕೆಎಂಎಫ್ ಯಾವುದೇ ಪ್ರಸ್ತಾವನೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಿಲ್ಲ. ಆದರೆ ಪಶು ಆಹಾರ, ವಿದ್ಯುತ್ ದರ ಹೆಚ್ಚಳ, ಸಾಗಾಣಿಕೆ ವೆಚ್ಚ, ನಿರ್ವಹಣೆ ವೆಚ್ಚ ದುಬಾರಿಯಾಗಿರುವುದರಿಂದ ಹಾಲಿನ ದರ ಹೆಚ್ಚಳ ಮಾಡಬೇಕೆಂಬ ಒತ್ತಡ ಸರ್ಕಾರದ ಮೇಲೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಎಂಎಫ್ ಶೀಘ್ರವೇ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 1 ರಿಂದ 2 ರೂ.ವರೆಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

