
Read Time:46 Second
ಬಂಟ್ವಾಳ: ಬಂಟ್ವಾಳ ತಾಲೂಕು ನರಿಗಾನ ಗ್ರಾಮದ ಪಟ್ಟುಲಿಕೆ ವಾಸಿಯಾಗಿರುವ ನಜೀಮ್ ಅಲಿಯಾಸ್ ನಜ್ಜು (30) ವಿರುದ್ಧ ಉಳ್ಳಾಲ, ಕೊಣಾಜೆ, ಮಂಗಳೂರು ನಾರ್ತ್, ಬೇಗೂರು (ಬೆಂಗಳೂರು ನಗರ) ಹಾಗೂ ಭಟ್ಕಳ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಜಾಮೀನು ಪಡೆದು ಒಂದೂವರೆ ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಈತನ ವಿರುದ್ಧ ವಾರೆಂಟ್ ಹಾಗೂ ಪ್ರೋಕ್ಲಮೇಷನ್ ಹೊರಡಿಸಲಾಗಿತ್ತು.


ವಿಶೇಷ ಕ್ರಮ ಕೈಗೊಂಡ ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.