ಮಂಗಳೂರು : ನೆರೆ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ…!!

0 0
Read Time:1 Minute, 40 Second

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,  ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಇಂದು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದ ಜಿಲ್ಲಾಧಿಕಾರಿ ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದರು. ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಕಾಳಜಿ ಕೇಂದ್ರಗಳಲ್ಲಿ ತಂಗಿರುವ ನಾಗರಿಕರೊಂದಿಗೆ ಸಮಾಲೋಚಿಸಿ, ಧೈಯ೯ ತುಂಬಿದ ಜಿಲ್ಲಾಧಿಕಾರಿಗಳು, ಸಹಜ ಪರಿಸ್ಥಿತಿ ಬರುವವರೆಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದರು. ಹರೇಕಳ, ಬಂಟ್ವಾಳ, ಆಲಡ್ಕ, ಉಪ್ಪಿನಂಗಡಿ ಮತ್ತಿತರ ಕಡೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ನೆರೆ ಪರಿಸ್ಥಿತಿ ವೀಕ್ಷಿಸಿದರು.

ಈ ಸಂದಭ೯ದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ಬಂಟ್ವಾಳ ತಹಶೀಲ್ದಾರ್ ಅಚ೯ನಾ ಭಟ್, ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಢೆ, ಮತ್ತಿತರರು  ಉಪಸ್ಥಿತರಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *