
NIT Karnataka Recruitment 2024: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (National Institute of Technology -Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸ್ಟೂಡೆಂಟ್ ಇಂಟರ್ನ್ಶಿಪ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಮೇ 30, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್ನಲ್ಲಿ ಉದ್ಯೋಗ (Job) ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್/ ಕೆಮಿಕಲ್/ಬಯೋಟೆಕ್ನಾಲಜಿಯಲ್ಲಿ ಬಿಇ/ಬಿ.ಟೆಕ್, ಎನ್ವಿರಾನ್ಮೆಂಟಲ್ ಎಂಜಿನಿಯರಿಂಗ್/ಕೆಮಿಕಲ್ ಎಂಜಿನಿಯರಿಂಗ್/ಇಂಡಸ್ಟ್ರಿಯಲ್ ಬಯೋಟೆಕ್ನಾಲಜಿ/ ಎನ್ವಿರಾನ್ಮೆಂಟಲ್ ಸೈನ್ಸ್ & ಟೆಕ್ನಾಲಜಿಯಲ್ಲಿ ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.


ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 5,000
ಉದ್ಯೋಗದ ಸ್ಥಳ:
ಸುರತ್ಕಲ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಮೇ 30ರೊಳಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/05/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 30, 2024