ಮಂಗಳೂರು: 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸದಸ್ಯನ ಬಂಧನ

0 0
Read Time:3 Minute, 40 Second

ಮಂಗಳೂರು : 1997ರಲ್ಲಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹಾಗೂ ಕಳೆದ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ಸದಸ್ಯ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ (55)ನನ್ನು ಮಂಗಳೂರು ನಗರದ ಉರ್ವ ಪೊಲೀಸ್ ಠಾಣೆಯ ಪೊಲೀಸರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಳ್ಳಿಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿ ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚೆಗೆ ಆಂಧ್ರಪ್ರದೇಶದ ವಿಜಯನಗರ ಕಾಲೋನಿ, ಬಿ.ಕೆ.ಪಳ್ಳಿ, ಮದನಪಳ್ಳಿ ಪ್ರದೇಶದಲ್ಲಿ ವಾಸವಾಗಿದ್ದನು. ಆರೋಪಿಯನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣದ ಹಿನ್ನೆಲೆ
1997ರ ಅಕ್ಟೋಬರ್ 11ರಂದು ಮಧ್ಯರಾತ್ರಿ ಮಂಗಳೂರು ತಾಲೂಕಿನ ಉರ್ವಾ ಮಾರಿಗುಡಿ ಕ್ರಾಸ್ ಬಳಿಯ ಅನ್ವರ್ ಮಹಲ್ ಎಂಬ ನಿವಾಸಕ್ಕೆ ನುಗ್ಗಿದ್ದ ದಂಡುಪಾಳ್ಯ ಗ್ಯಾಂಗ್ ಸದಸ್ಯರು, ಮನೆಯಲ್ಲಿದ್ದ 80 ವರ್ಷದ ಶ್ರೀಮತಿ ಲೂವಿಸ್ ಡಿಮೆಲ್ಲೋ ಹಾಗೂ 19 ವರ್ಷದ ರಂಜಿತ್ ವೇಗಸ್ ಅವರನ್ನು ಕೊಲೆ ಮಾಡಿ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದರು.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ ಆರೋಪಿಗಳಾದ ದೊಡ್ಡ ಹನುಮ @ ಹನುಮ ಸೇರಿದಂತೆ ಐದು ಮಂದಿಯನ್ನು ನ್ಯಾಯಾಲಯ ದೋಷಿಗಳೆಂದು ತೀರ್ಪು ನೀಡಿದ್ದು, ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಆವರಣದಲ್ಲಿರುವ 34ನೇ ಅಪರ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಲಯ (ವಿಶೇಷ ನ್ಯಾಯಾಲಯ)ವು ಎಸ್.ಸಿ.ನಂ.728/2010 ಪ್ರಕರಣದಲ್ಲಿ ಶಿಕ್ಷೆ ವಿಧಿಸಿದೆ.
ಹೆಸರು ಬದಲಿಸಿ ತಲೆಮರೆಸಿಕೊಂಡಿದ್ದ ಆರೋಪಿ
ಆರೋಪಿ ಚಿಕ್ಕ ಹನುಮ ತನ್ನ ಹೆಸರು ಬದಲಿಸಿಕೊಂಡು ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಂಗಳೂರು ಜೆಎಂಎಫ್‌ಸಿ 2ನೇ ನ್ಯಾಯಾಲಯವು 2010ರಲ್ಲಿ ಎಲ್‌ಪಿಸಿ ವಾರೆಂಟ್ ಜಾರಿಗೊಳಿಸಿತ್ತು. ಆರೋಪಿಯ ಮೇಲೆ ಕರ್ನಾಟಕ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 13 ಕೊಲೆ ಹಾಗೂ ದರೋಡೆ ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಪತ್ತೆ ಕಾರ್ಯದಲ್ಲಿ ಶ್ರಮ
ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಉರ್ವ ಪೊಲೀಸ್ ಠಾಣೆಯ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ., ಪಿಎಸ್ಐ ಗುರಪ್ಪ ಕಾಂತಿ, ಪಿಎಸ್ಐ ಎಲ್. ಮಂಜುಳಾ, ಎಎಸ್ಐ ವಿನಯಕುಮಾರ್ ಹಾಗೂ ಸಿಬ್ಬಂದಿಗಳಾದ ಲಲಿತಲಕ್ಷ್ಮಿ, ಅನಿಲ್, ಪ್ರಮೋದ್, ಆನಂದ, ಹರೀಶ್ ಸೇರಿದಂತೆ ಇತರರು ಶ್ರಮಿಸಿದ್ದಾರೆ.

ಈ ಸಾಧನೆಯನ್ನು ಗಮನಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ತಂಡದ ಕಾರ್ಯವನ್ನು ಪ್ರಶಂಸಿಸಿ, ಹೆಚ್ಚಿನ ಬಹುಮಾನಕ್ಕಾಗಿ ಕರ್ನಾಟಕ ರಾಜ್ಯ ಡಿಜಿ & ಐಜಿಪಿ ಅವರಿಗೆ ಶಿಫಾರಸು ಮಾಡಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *