
ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಮೇ 31 ಅವಕಾಶ ನೀಡಲಾಗಿತ್ತು. ಈ ನಡುವೆ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಜೂನ್ 12 ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಸರ್ಕಾರ ಕಾಲಾವಕಾಶ ನೀಡಿದೆ.


ಹೌದು, ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇರುವ ಮೇ 31ರ ಗಡುವು ವಿಸ್ತರಣೆ ಕೋರಿ BND ಎನರ್ಜಿ ಲಿಮಿಟೆಡ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ನಿನ್ನೆ ಹೈಕೋರ್ಟ್ ಮುಂದೆ ಈ ರಿಟ್ ಅರ್ಜಿ ವಿಚಾರಣೆಗೆ ಬಂದಿದೆ. ಆದ್ರೆ, ಹಲವು ರಿಟ್ ಅರ್ಜಿಗಳ ವಿಚಾರಣೆ ಜೂನ್ 11ಕ್ಕೆ ನಿಗದಿಯಾಗಿದೆ. ಹೀಗಾಗಿ ಹೀಗಾಗಿ ಜೂನ್ 12 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರದ ಪರವಾಗಿ ಎಎಜಿ ರೂಬೆನ್ ಜೇಕಬ್ ಅವರು ಹೈಕೋರ್ಟ್ಗೆ ಹೇಳಿದ್ದಾರೆ. ಎಎಜಿ ರೂಬೆನ್ ಜೇಕಬ್ ಅವರು ಈ ಹೇಳಿಯನ್ನು ದಾಖಲಿಸಿಕೊಂಡ ಹೈಕೋರ್ಟ್ ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿದೆ.
ರಾಜ್ಯದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಿರುವ ಸುಮಾರು 2 ಕೋಟಿ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನ, ಪ್ರಯಾಣಿಕ ಕಾರುಗಳು, ಮಧ್ಯಮ, ಭಾರಿ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್‌ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ.


ಎಚ್‌ಎಸ್‌ಆರ್‌ಪಿ ಅಳವಡಿಸದಿದ್ರೆ ವಾಹನ ಮಾಲೀಕತ್ವ, ವಿಳಾಸ ವರ್ಗಾವಣೆ, ಕಂತು ಕರಾರು ನಮೂದು, ರದ್ದತಿ, ಅರ್ಹತಾಪತ್ರ ನವೀಕರಣ ಸೇವೆಗೆ ಅನುಮತಿ ಇರುತ್ತಿರಲಿಲ್ಲ. ಹಾಗೇ ಇದರ ಜೊತೆ ಭಾರಿ ಪ್ರಮಾಣದ ದಂಡ ಕೂಡ ಮಾರ್ಗಸೂಚಿ ಪಾಲಿಸದ ವಾಹನ ಮಾಲೀಕರಿಗೆ ತಟ್ಟುತ್ತಿತ್ತು.

ಈ ವಿಧಾನ ಅನುಸರಿಸಿ, ನಿಮ್ಮ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿ
• https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ.
• ನಿಮ್ಮವಾಹನ ತಯಾರಕರನ್ನು ಆಯ್ಕೆಮಾಡಿ.
• ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. • HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
• HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
• ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.
• ನಿಮ್ಮಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
• ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
• ನಿಮ್ಮವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.