ನೀರಿನ ಬಾಟಲ್‌ಗೂ ನಿಷೇಧ: ಆಗಸ್ಟ್ 15ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯಗಳು

ಬೆಂಗಳೂರು,ಜೂ. 09 : ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಮುಕ್ತ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ತಿಳಿಸಿದರು. ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು,…

Read More

ಡೆಂಗ್ಯೂ ನಿಯಂತ್ರಣಕ್ಕೆ ಜಿಲ್ಲಾಡಳಿತದ ದಿಟ್ಟ ಹೆಜ್ಜೆ – ಜನರಿಗೆ ಜಾಗೃತಿ ಕರೆ

ಮಂಗಳೂರು,ಜೂ. 09 :ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರು ಈ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವಲ್ಲಿ ಸಾರ್ವಜನಿಕ ಜಾಗೃತಿ ಮತ್ತು ಕ್ರಮದ ಮಹತ್ವವನ್ನು ಒತ್ತಿ ಹೇಳಿದರು. ಮೇ ತಿಂಗಳೊಂದರಲ್ಲೇ 10 ದೃಢಪಡಿಸಿದ ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಶಂಕಿತ ಪ್ರಕರಣಗಳು ಹರಡುವ ಲಕ್ಷಣಗಳನ್ನು ತೋರಿಸುತ್ತಿವೆ ಎಂದು ಡಾ. ತಿಮ್ಮಯ್ಯ ವರದಿ…

Read More

ಎನ್‌ಐಎ ತನಿಖೆಗೆ ಆದೇಶ: ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸಮಾಧಾನ

ಬಂಟ್ವಾಳ, ಜೂ. 09 : ಮೇ 1ರಂದು ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿದ್ದು, ನಮಗೆ ತುಂಬಾ ಸಮಾಧಾನ ತಂದಿದೆ. ಇದಕ್ಕಾಗಿ ಇಡೀ ಮೋದಿ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ತಿಳಿಸಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ತನಿಖೆಗೆ ವಹಿಸಿರುವುದರ ಕುರಿತು ಮಾತನಾಡಿದ ಅವರು, ಹಿಂದೂ ಸಮಾಜಕ್ಕೆ ತನ್ನ ಇಡೀ ಜೀವನ ಸವೆಸಿದ ಮಗ ಸುಹಾಸ್ ಶೆಟ್ಟಿ ಸಾವಿನ ಬಗ್ಗೆ ಎನ್‌ಐಎ…

Read More

ದಕ್ಷಿಣ ಕನ್ನಡದಲ್ಲಿ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಯತ್ನ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೋರಿಯಾರ್ ಸಮೀಪ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಗಾಯಾಳು ಹನುಮಪ್ಪ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಮೂಲದ ಅಣ್ಣ-ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಪ್ಯಾಸೆಂಜರ್ ರೈಲಿನಲ್ಲಿ ಆಗಮಿಸಿದ ಇವರು ಬಜಕರೆ ರೈಲು ನಿಲ್ದಾಣದಲ್ಲಿ ಇಳಿದಿದ್ದಾರೆ. ರೈಲು ಹೋದ ನಂತರ ಸುಮಾರು 500 ಮೀಟರ್ ದೂರದವರೆಗೂ ಅಣ್ಣನನ್ನು ಕರೆದುಕೊಂಡು ಹೋದ ತಮ್ಮ ನಿಂಗಪ್ಪ ಏಕಾಏಕಿ ಪೆಟ್ರೋಲ್…

Read More

ಬುದ್ಧನ ಧ್ಯಾನ ಶಿಲ್ಪ ಪತ್ತೆ: ಕದ್ರಿ ದೇವಾಲಯದ ಕೆರೆಯಲ್ಲಿ ಅಪರೂಪದ ಅನ್ವೇಷಣೆ

ಮಂಗಳೂರು: ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯ ದ ಕೆರೆಯೊಂದರಲ್ಲಿ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಇತ್ತೀಚೆಗೆ ನಡೆಸಿದ ಪುರಾತತ್ವ ಅನ್ವೇಷಣೆಯ ಸಂದರ್ಭ ದಲ್ಲಿ ಪತ್ತೆಯಾಗಿವೆ ಎಂದು ಶಿರ್ವದ ಮುಲ್ಕಿ ಸುಂದರ್‌ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ. ದೇವಾಲಯದ ಕೆರೆಯ ನೀರಿನಲ್ಲಿ ವಿಸರ್ಜನೆ ಮಾಡಿರುವ ಸ್ಥಿತಿಯಲ್ಲಿ ಕಂಡುಬಂದ ಈ ಶಿಲ್ಪವನ್ನು ಕದ್ರಿ ದೇವಾಲಯದ ಆಡಳಿತಾಧಿಕಾರಿಗಳ ಅನುಮತಿಯೊಂದಿಗೆ ಮೇಲೆ ತೆಗೆದು ಅಧ್ಯಯನ ಮಾಡಲಾಗಿದೆ ಎಂದು ಪ್ರೊ.ಮುರುಗೇಶಿ…

Read More

ವೈರಲ್ ತಲ್ವಾರ್ ಫೋಟೋ ಸುಳ್ಳು ಎಂದು ದೃಢ – ತಪ್ಪು ಸುದ್ದಿ ಹರಡಿಸಿದವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು ಜೂನ್ 07: ಸಾಮಾಜಿಕ ಜಾಲತಾಣ ವಾಟ್ಸಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆ ಎಂಬ ಪೋಟೋ ಮತ್ತು ವಾಯ್ಸ್ ಕ್ಲಿಪ್ ವೈರಲ್ ಆಗಿದ್ದು, ಇದೀಗ ಈ ಮಾಹಿತಿ ಸಂಪೂರ್ಣ ಸುಳ್ಳು ಸುದ್ದಿ ಎಂದು ತಿಳಿದು ಬಂದಿದೆ. ಇಬ್ಬರು ಯುವಕರು ಮೂಡಬಿದ್ರೆಗೆ ಹೋಗುತ್ತಿದ್ದಾಗ ಹಿಂಬದಿಯ ಸವಾರ ತನ್ನ ಕೈಯಲ್ಲಿ ಆಕ್ವೇರಿಯಂ ಕಲ್ಲು ಮತ್ತು ಇ-ಸಿಗರೇಟ್ ಹಿಡಿದುಕೊಂಡಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಬಜ್ಪೆ ಠಾಣೆಯಲ್ಲಿ ತಪ್ಪು ಮಾಹಿತಿ ಹರಡಿದವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ…

Read More

ಮಂಗಳೂರು: ಯೆಯ್ಯಾಡಿಯಲ್ಲಿ  ಯುವಕನಿಗೆ ಚೂರಿ ಇರಿತ, ಸ್ಥಿತಿ ಚಿಂತಾಜನಕ

ಮಂಗಳೂರು: ನಗರದ ಯೆಯ್ಯಾಡಿಯಲ್ಲಿ ಶುಕ್ರವಾರ ಮದ್ಯಾಹ್ನದ ವೇಳೆಯಲ್ಲಿ ಯುವಕನಿಗೆ ಚೂರಿ ಇರಿದ ಪ್ರಕರಣ ನಡೆದಿದೆ. ಕೌಶಿಕ್ ಎಂಬಾತ ಚೂರಿ ಇರಿತಕ್ಕೆ ಒಳಗಾದವ ಎಂದು ಹೇಳಲಾಗಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಚೂರಿ ಇರಿದ ಆರೋಪಿಗಳು ಎಂದು ತಿಳಿದು ಬಂದಿದೆ. ಒಂದು ತಿಂಗಳ ಹಿಂದೆ ಕ್ಷುಲ್ಲಕ ವಿಚಾರಕ್ಕೆ ಇವರುಗಳ ಮಧ್ಯೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ.ಬ್ರಿಜೇಶ್ ಶೆಟ್ಟಿ ಕೌಶಿಕ್ ಎಂಬಾತನಿಗೆ ಹೊಡೆದಿದ್ದ ಇದೇ ವೇಳೆ ಬ್ರಿಜೇಶ್ ಗೆ ಕೌಶಿಕ್ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಗಲಾಟೆಯ ದ್ವೇಷದ…

Read More

ಮಕ್ಕಳನ್ನು ಸುರಕ್ಷಿತವಾಗಿ ದಾಟಿಸುತ್ತಿದ್ದಾಗ ಬಸ್ ಡಿಕ್ಕಿ: ಯುವಕ ನಿಧನ

ಬಂಟ್ವಾಳ ಜೂನ್ 07: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿ ಹಿಂದಿರುಗುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಬಳಿ ಸಂಭವಿಸಿದೆ. ಮೃತರನ್ನು ಅಮೆಮ್ಮಾರ್ ನಿವಾಸಿ ಝಾಹಿದ್ (28) ಎಂದು ಗುರುತಿಸಲಾಗಿದೆ. ಅವರು ಶಾಲೆಗೆ ತೆರಳುವ ಮಕ್ಕಳನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿ ಹಿಂದಿರುಗುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಆಗಮಿಸಿದ ಬಸ್ ಢಿಕ್ಕಿ ಹೊಡೆಯಿತು. ಘಟನೆಯಲ್ಲಿ ಝಾಹೀದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಆಟೋ…

Read More

ಅರುಣ್ ಪುತ್ತಿಲ ಗಡಿಪಾರು ಪ್ರಕರಣ:ನೋಟಿಸ್ ವಿಚಾರಣೆಯಲ್ಲಿ ಪೊಲೀಸರಿಗೆ ಹಿನ್ನಡೆ

ಪುತ್ತೂರು : ಇತ್ತಿಚೆಗೆ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಬೆನ್ನಲ್ಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ಸಿದ್ದತೆ ಮಾಡಿಕೊಂಡಿದ್ದ ಪೊಲೀಸರಿಗೆ ಹಿನ್ನಡೆಯಾಗಿದೆ. ಗಡೀಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದು, ಪುತ್ತಿಲ ಪರವಾಗಿ ವಾದ ಮಂಡಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ನೋಟಿಸ್‌ ನೀಡಿ…

Read More

ಪತಿ ನಾಪತ್ತೆ: ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೆಬ್ರಿ: ಹೆಬ್ರಿಯ ತಮ್ಮ ಮನೆಯಿಂದ ಕೆಲಸಕ್ಕೆಂದು ಹೋದ ವ್ಯಕ್ತಿಯೊಬ್ಬರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ವಸಂತಿ ಎಂಬವರ ಪತಿ ಪ್ರಭಾಕರ(46ವರ್ಷ) ನಾಪತ್ತೆಯಾದವರು. ಪ್ರಭಾಕರ ಅವರು ಈ ಹಿಂದೆ ಸುಮಾರು 5-6 ಬಾರಿ ಮನೆಯಿಂದ ಕೆಲಸಕ್ಕೆಂದು ಹೋದವರು ಸುಮಾರು 2-3 ತಿಂಗಳವರೆಗೆ ಇದ್ದು ನಂತರ ಮನೆಗೆ ವಾಪಾಸಾಗುತ್ತಿದ್ದರು. ಆದರೆ 2023 ರ ಡಿಸೆಂಬರ್‌ನಲ್ಲಿ ಮನೆಯಿಂದ ಹೋದವರು ಈವರೆಗೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆಂದು ಅವರ ಪತ್ನಿ ದೂರು ನೀಡಿದ್ದು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More