ಮಂಗಳೂರು:ಹಲವಾರು ರೈಲು ಸೇವೆಯಲ್ಲಿ ಬದಲಾವಣೆ

ಮಂಗಳೂರು: ದಕ್ಷಿಣ ರೈಲ್ವೆಯ ಪಾಲಕ್ಕಾಡ್‌ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣ ಕಾರ್ಯಗಳನ್ನು ನಿರ್ವಹಿಸುವ ಹಿನ್ನಲೆಯಲ್ಲಿ ವಿವಿಧ ರೈಲು ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ಜೂ. 16 ರಂದು ಎರ್ನಾಕುಲಂ ಜಂಕಕ್ಷನ್‌ನಿಂದ ಸಂಜೆ 6.50ಕ್ಕೆ ಹೊರಡುವ 11098 ಎರ್ನಾಕುಲಂ ಜಂಕ್ಷನ್‌ -ಪುಣೆ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು 2 ಗಂಟೆಗಳ ಕಾಲ ವಿಳಂಬವಾಗಲಿದ್ದು, ರಾತ್ರಿ 8.50ಕ್ಕೆ ನಿಗದಿಯಾಗಿದೆ. ಜೂ.5ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ಮಂಗಳೂರು ಸೆಂಟ್ರಲ್‌-ಕೊಯಮತ್ತೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲು(ನಂ.16324) 1 ಗಂಟೆ ಕಾಲ ವಿಳಂಬವಾಗಲಿದೆ. ಜೂ.7ರಂದು ಕೊಯಮತ್ತೂರು ಜಂಕ್ಷನ್‌ನಿಂದ ಹೊರಡುವ ಕೊಯಮತ್ತೂರು…

Read More

ಆದಿಶಕ್ತಿ ಕ್ಷೇತ್ರದಲ್ಲಿ ಮರುಕಳ್ಳತನ ಯತ್ನ ವಿಫಲ – ಕಳ್ಳ ಪೊಲೀಸರ ವಶಕ್ಕೆ

ಹೆಬ್ರಿ : ಒಂದು ಬಾರಿ ದೈವಸ್ಥಾನದ ಕಾಣಿಕೆ ಹುಂಡಿ ಕದ್ದಿದ್ದ ಕಳ್ಳ ಮತ್ತೊಮ್ಮೆ ಅದೇ ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕದಿಯಲು ಬಂದು ಸಿಕ್ಕಿಹಾಕಿಕೊಂಡ ಘಟನೆ ಮುದ್ರಾಡಿ ಗ್ರಾಮದ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರದಲ್ಲಿ ನಡೆದಿದೆ. ಈ ಹಿಂದೆ ಕಳ್ಳತನ ನಡೆದಾಗ ದೈವ ನೀಡಿದ್ದ ಅಭಯದಂತೆ ಕಳ್ಳ ಸಿಕ್ಕಿದ್ದು ದೈವದ ಕಾರಣಿಕ ಎಂದು ಜನರು ನಂಬಿದ್ದಾರೆ. ಮುದ್ರಾಡಿ ಗ್ರಾಮದ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರದಲ್ಲಿ ದೇವರ ಹುಂಡಿ ಹಾಗೂ ಕಲ್ಕುಡ ಕಲ್ಲುರ್ಟಿಯ ಕಾಣಿಕೆ ಡಬ್ಬಿಯಿಂದ ಮೇ…

Read More

ಸುಹಾಸ್ ಶೆಟ್ಟಿ ಹತ್ಯೆ ತನಿಖೆ ಪ್ರಗತಿ: ಮತ್ತೊಬ್ಬ ಆರೋಪಿಯ ಬಂಧನ

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೇ 1 ರಂದು ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದೆ. ಬಂಧಿತ ವ್ಯಕ್ತಿಯ ಮೇಲೆ ಪ್ರಮುಖ ಆರೋಪಿಯೊಂದಿಗೆ ಕೊಲೆಗೆ ಸಂಚು ರೂಪಿಸಿದ ಮತ್ತು ಬಂಧನದಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪವಿದೆ.ಬಂಧಿತನನ್ನು ಮಂಗಳೂರು ಬಜ್ಪೆ ಶಾಂತಿಗುಡ್ಡೆಯ ಬದ್ರಿಯಾ ಜುಮಾ ಮಸೀದಿ ಬಳಿಯ ನಿವಾಸಿ ದಿವಂಗತ ಬಾವ ಅಬ್ದುಲ್ ರೆಹಮಾನ್ ಅವರ…

Read More

ಮಂಗಳೂರಿನಲ್ಲಿ ಟಿಂಟೆಡ್ ಗ್ಲಾಸ್ ವಿರುದ್ಧ ವಿಶೇಷ ಪೊಲೀಸ್ ಕಾರ್ಯಾಚರಣೆ

ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಟಿಂಟ್ ಗ್ಲಾಸ್ ಆಳವಡಿಸಿರುವ ಕಾರುಗಳ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಎರಡು ದಿನಗಳ ಅಂತರದಲ್ಲಿ 223 ಪ್ರಕರಣ ದಾಖಲಿಸಿ  1 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ 02-06-2025 ಮತ್ತು 03-06-2025 ರಂದು ನಗರದ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿ ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್…

Read More

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆ ಗಳ ಒಕ್ಕೂಟ (ರಿ ) ಇದರ ಜಿಲ್ಲಾಧ್ಯಕ್ಷರಾಗಿ ಲ| ಅನಿಲ್ ದಾಸ್ ಆವಿರೋದ ಆಯ್ಕೆ

ಕರ್ನಾಟಕ ರಾಜ್ಯ ಕುಲಾಲರ /ಕುಂಬಾರರ ಯುವ ವೇದಿಕೆಗಳ ಹಾಗು ಮಹಿಳಾ ಸಂಘಟನೆಗಳ ಒಕ್ಕೂಟ ರಿ. ಮಂಗಳೂರು ಇದರ ರಾಜ್ಯ, ವಿಭಾಗ, ಜಿಲ್ಲೆ ಹಾಗೂ ವಿಧಾನಸಭಾ/ ತಾಲೂಕು ಘಟಕಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಆಯ್ಕೆ ಪ್ರಕ್ರಿಯೆಗೆ ಚಾಲನೆ ಕೊಡುವಂತೆ ರಾಜ್ಯ, ವಿಭಾಗ ಹಾಗೂ ಜಿಲ್ಲಾ ನಾಯಕರುಗಳಿಗೆ ನೋಂದಾಯಿತ ಕೇಂದ್ರಸಮಿತಿಯಿಂದ ಅಧಿಕಾರ ಹಸ್ತಾಂತರ 15 ವರ್ಷಗಳ ಸೇವೆ ಸಲ್ಲಿಸಿದ ಬಳಿಕ ನೊಂದಾವಣೆ ಗೊಂಡು, 15 ವರ್ಷಗಳಲ್ಲಿ ಮಾಡಿದ ಸಮಾಜ ಮುಖೀ ಸೇವೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಮುದಾಯದ…

Read More

ಶ್ರೀಕಾಂತ್ ಶೆಟ್ಟಿ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಪ್ರಚೋದನಕಾರಿ ಭಾಷಣ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಎಫ್ಐಆರ್ ರದ್ದು ಕೋರಿ ಹೈಕೋರ್ಟ್ಗೆ ಶ್ರೀಕಾಂತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, “ಭಾಷಣದ ಹಲವು ದಿನಗಳ ಬಳಿಕ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ. ಹೀಗಾಗಿ ಮಧ್ಯಂತರ…

Read More

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ 36 ಮಂದಿ ವಿರುದ್ಧ ಗಡಿಪಾರು ಪ್ರಕ್ರಿಯೆ ಆರಂಭ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯ ವ್ಯಾಪ್ತಿಯಲ್ಲಿ 36 ಮಂದಿ ರೌಡಿಶೀಟರ್ ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ್ಲ, ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ, ಬಂಟ್ವಾಳದ ಭರತ್ ಕುಮ್ಡೇಲ್ ಸೇರಿ 36 ಮಂದಿ ಲಿಸ್ಟ್ ನಲ್ಲಿದ್ದಾರೆ.ಬಂಟ್ವಾಳ ನಗರ ವ್ಯಾಪ್ತಿಯಿಂದ 4 ಮಂದಿ, ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯಿಂದ…

Read More

ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ್‌ ಅಮೀನ್‌ ಬಂಧನ

ಕಾರ್ಕಳ : ಹಿಂದೂ ಜಾಗರಣ ವೇದಿಕೆ ಜಿಲ್ಲಾ ಮುಖಂಡ, ಎಪಿಎಂಸಿ ಮಾಜಿ ಅಧ್ಯಕ್ಷ ರತ್ನಾಕರ ಅಮೀನ್‌ ಅವರನ್ನು ಜೂ. 2ರಂದು ಅಜೆಕಾರು ಪೊಲೀಸರು ಬಂಧನ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟರ್‌ ಅನ್ನು ಹಂಚಿಕೊಂಡಿರುವ ಆರೋಪದ ಹಿನ್ನೆಲೆ ಅಜೆಕಾರು ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಸೋಮವಾರ ಮುಂಜಾನೆ ಬಂಧಿಸಿದ್ದಾರೆ.

Read More

RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ `FIR’ ದಾಖಲು

ಮಂಗಳೂರು : ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್…

Read More

ಬಂಟ್ವಾಳ: ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಿಂದ ಫೋಟೋ ತೆಗೆದು ದುರುಪಯೋಗ- ಪ್ರಕರಣ ದಾಖಲು

ಬಂಟ್ವಾಳ : ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಫೋಟೊವನ್ನು ದುರುಪಯೋಗಪಡಿಸಿಕೊಂಡ ಕಿಡಿಗೇಡಿಗಳು ಇತ್ತೀಚೆಗೆ ನಡೆದ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ದ್ವೇಷ ಉಂಟು ಮಾಡುವ ಸಂದೇಶ ಪ್ರಸಾರ ಮಾಡಿದ ಬಗ್ಗೆ ವ್ಯಕ್ತಿಯೋರ್ವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಅಮ್ಮಾಡಿ ಗ್ರಾಮದ ಲೊರೆಟ್ರೊಪದವು ನಿವಾಸಿ ಪ್ರಜ್ವಲ್ ಶೆಟ್ಟಿ (29) ಅವರು ಪೊಲೀಸರಿಗೆ ದೂರು ನೀಡಿದ್ದು, ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಫೋಟೊವನ್ನು ಕಿಡಿಗೇಡಿಗಳು ದುರುಪಯೋಗ ಪಡಿಸಿಕೊಂಡು, ಇತ್ತೀಚೆಗೆ ನಡೆದ ಯುವಕನ ಕೊಲೆ ಪ್ರಕರಣಕ್ಕೆ…

Read More