ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ..!!

ಮಂಗಳೂರು : ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279/5 ರಲ್ಲಿ 1.39 ಎಕರೆ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆ ಕಟ್ಟಲು ಜಾಗದಲ್ಲಿದ್ದ ಕಟ್ಟಡ ಕಲ್ಲು ತೆರವು ಮಾಡಿ ಸಮತಟ್ಟು ಮಾಡಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ 28/10/2024 ರಂದು ಅರ್ಜಿ ಸಲ್ಲಿಸಿದ್ದು. ಇದಕ್ಕೆ ಉಳ್ಳಾಲ  ತಹಶಿಲ್ದಾರರು 21/03/2025 ರಂದು ಪ್ರಮಾಣ ಪತ್ರ ನೀಡಿರುತ್ತಾರೆ. ಆದ್ರೆ ಗಣಿ ಇಲಾಖೆಯಲ್ಲಿ ಅನುಮತಿ ಪತ್ರ ನೀಡಿರುವುದಿಲ್ಲ . ಈ ಬಗ್ಗೆ ವಿಚಾರಿಸಲು ಗಣಿ…

Read More

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತೆ ಸಾಮಾಜಿಕ ಜಾಲ ತಾಣದಲ್ಲಿ ಫೋಟೋ ಹಾಕಿ ರಿವೇಂಜ್ ವಾರ್..!

ಮಂಗಳೂರು : ಶಾಂತವಾಗಿದ್ದ ದಕ್ಷಿಣಕನ್ನಡ ಜಿಲ್ಲೆ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಸೇಡಿಗೆ ಸಹ ಸೇಡಿನಂತೆ ಟಾರ್ಗೆಟ್ ಬಾಯ್ ಪೇಜ್ ಮೂಲಕ ಮತ್ತೆ ಟಾರ್ಗೆಟ್ ಮಾಡಿದ್ದಾರೆ. ಇನ್ಸ್ಟಾ ಗ್ರಾಮ್ ಪೇಜ್ ಮೂಲಕ ರಿವೇಂಜ್ ಬೆದರಿಕೆ ಹಾಕಿದ್ದು ಭಜರಂಗದಳ ಮುಖಂಡ ಭರತ್ ಕುಮ್ಡೇಲ್ ಫೋಟೋ ಹಾಕಿ ರಿವೇಂಜ್ ಪೋಸ್ಟ್ ಮಾಡಿದ್ದಾರೆ. ಭರತ್ ಕುಮ್ಡೇಲು ಎಸ್ ಡಿ ಪಿ ಐ ಕಾರ್ಯಕರ್ತ ಅಶ್ರಫ್ ಕಲಾಯಿ ಹತ್ಯೆಯ ಪ್ರಮುಖ ಆರೋಪಿಯಾಗಿದ್ದು ಕಳೆದ ಕೆಲ ತಿಂಗಳುಗಳಿಂದ ಭರತ್ ಕುಮ್ಡೇಲು ಮೇಲೆ ನಿರಂತರ ಬೆದರಿಕೆ…

Read More

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಸುರತ್ಕಲ್ ನಲ್ಲಿ ಖಾಸಗಿ ಬಸ್ ಮೇಲೆ ಕಲ್ಲುತೂರಾಟ

ಮಂಗಳೂರು: ಬಂಟ್ವಾಳ ತಾಲ್ಲೂಕಿನ ಇರಾ ಕೋಡಿ ಎಂಬಲ್ಲಿ ಹತ್ಯೆಗೊಳಗಾದ ಅಬ್ದುಲ್ ರಹೀಂ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು. ಅಂತಿಮ ಯಾತ್ರೆಯ ಸಾಗುವ ವೇಳೆ ಫರಂಗಿಪೇಟೆ ಹಾಗೂ ಬಿ.ಸಿ.ರೋಡ್‌ನಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಉಳ್ಳಾಲ ತಾಲ್ಲೂಕಿನ ಕುತ್ತಾರಿನಿಂದ ಹೊರಟ ಅಂತಿಮಯಾತ್ರೆಯು ಮಂಗಳೂರಿನ ನಂತೂರು, ಪಡೀಲ್ ಅಡ್ಯಾರ್ ಅರ್ಕುಳ, ಫರಂಗಿಪೇಟೆ, ಬಿ.ಸಿ.ರೋಡ್ ಮಾರ್ಗವಾಗಿ ಸಾಗಿತು. ಅಂಗಡಿಗಳು ಬಂದ್: ರಹೀಂ ಅವರ ಪಾರ್ಥಿವ ಶರೀರವನ್ನು ಹೊತ್ತ ಅಂಬುಲೆನ್ಸ್ ಫರಂಗಿಪೇಟೆಯ ಬಳಿ ಸಾಗುತ್ತಿದ್ದಂತೆಯೇ ಅಲ್ಲಿ ಸೇರಿದ್ದವರು…

Read More

ಅಬ್ದುಲ್ ರಹಿಮಾನ್ ಮೃತದೇಹ ಸಾಗಾಟ ವೇಳೆ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ..!

ಮಂಗಳೂರು:  ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಅಬ್ದುಲ್ ರಹಿಮಾನ್(34) ಅವರ ಮೃತದೇಹವನ್ನು ಇಂದು ಬೆಳಗ್ಗೆ  ಕುತ್ತಾರ್ ಮದನಿ ನಗರದ ಮಸೀದಿಗೆ ಸಾಗಿಸಲಾಯಿತು. ಈ ವೇಳೆ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಸಾರ್ವಜನಿಕರ ಗುಂಪು ರಸ್ತೆ ತಡೆ ನಡೆಸಿ ಘಟನೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.  ಕುತ್ತಾರ್, ತೊಕ್ಕೊಟ್ಟು, ಪಂಪ್ ವೆಲ್ ಮಾರ್ಗವಾಗಿ ಮೃತದೇಹ ಫರಂಗಿಪೇಟೆ ತಲುಪಿದ ವೇಳೆ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಸಾರ್ವಜನಿಕರ ಗುಂಪು ಆಕ್ರೋಶ ವ್ಯಕ್ತಪಡಿಸಿ…

Read More

ಯುವಕನ ಬರ್ಬರ ಹತ್ಯೆ ಪ್ರಕರಣ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 3 ದಿನ ನಿಷೇಧಾಜ್ಞೆ ಜಾರಿ..!

ಮಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಭೀಕರ ಕೊಲೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಯುವಕನೋರ್ವವನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೌದು ಯುವಕನ ಹತ್ಯೆಯ ಬಳಿಕ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

Read More

ಬಂಟ್ವಾಳ: ಯುವಕನ ಭೀಕರ ಹತ್ಯೆ ಪ್ರಕರಣ- 15 ಮಂದಿ ವಿರುದ್ಧ FIR

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದರ್ ಶಾಫಿ ಎಂಬವರ ಮೇಲಿನ ಕೊಲೆಯತ್ನ ಪ್ರಕರಣ‌ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ‌ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ…

Read More

ಮಂಗಳೂರು: ಹಿಂದೂ ಮುಖಂಡ ಶರಣ್ ಪಂಪ್ವೆಲ್ ಅರೆಸ್ಟ್..!!

ಮಂಗಳೂರು: ವಿಶ್ವ ಹಿಂದೂ ಪರಿಷತ್ತು ಮುಖಂಡ ಶರಣ್ ಪಂಪ್ವೆಲ್ ಅರೆಸ್ಟ್ ಮಾಡಲಾಗಿದೆ.  ಕದ್ರಿ ಪೊಲೀಸ್ ಠಾಣೆ ಮುಂಭಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ನಡೆದ ಸಂದರ್ಭ ದಕ್ಷಿಣಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಕದ್ರಿ ಪೊಲೀಸರಿಂದ ಶರಣ್ ಪಂಪ್ವೆಲ್ ಅರೆಸ್ಟ್ ಮಾಡಿದ್ದಾರೆ. ಶರಣ್ ಪಂಪ್ ವೆಲ್ ಅರೆಸ್ಟ್ ಸುದ್ದಿ ಹಿನ್ನಲೆ ಕದ್ರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ.

Read More

ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆ:ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಪತ್ತೆ

ಡೆಹ್ರಾಡೂನ್‌ನ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಜೀವ ಬಿಟ್ಟಿದ್ದಾರೆ. ಸೆಕ್ಟರ್ 27 ರಲ್ಲಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಇರುವುದು ಪತ್ತೆಯಾಗಿದೆ. ಕುಟುಂಬವು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ. ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್‌, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತಮ್ಮ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದರು ಎಂದು ಮೂಲಗಳು ತಿಳಿಸಿವೆ. ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬವು ಡೆಹ್ರಾಡೂನ್‌ಗೆ ಹಿಂತಿರುಗುತ್ತಿದ್ದಾಗ ಭಾನುವಾರ ಈ ಘಟನೆ…

Read More

ಬಂಟ್ವಾಳ: ಪಿಕಪ್ ಚಾಲಕನ ಬರ್ಬರ ಹತ್ಯೆ..!!

ಬಂಟ್ವಾಳ:ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ‌ಯಲ್ಲಿಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ಹನೀಫ್ ಎಂಬಾತನನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ ಯತ್ನ ನಡೆದ ಘಟನೆ ನಡೆದಿದೆ. ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್ ದಾಳಿ‌ ನಡೆಸಿದ್ದಾರೆ. ಜೊತೆಗಿದ್ದ ರಹೀಮ್ ಎಂಬಾತನ ಮೇಲೂ ದಾಳಿ.ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಶಾಸಕರಾದ ಶಿವರಾಮ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಬಿಜೆಪಿಯಿಂದ ಆರು ವರ್ಷ ಕಾಲ ಉಚ್ಚಾಟನೆ

ಬೆಂಗಳೂರು: ಹಿರಿಯ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಕಳೆದ ಮಾರ್ಚ್ 25ರಂದು ನೀಡಲಾದ ಶೋಕಾಸ್ ನೋಟಿಸ್ ಗೆ ಈ ಇಬ್ಬರು ಶಾಸಕರು ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ ಮತ್ತು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳ ಲಾಗಿದೆ ಎಂದು ಪಕ್ಷದ ಕೇಂದ್ರ ಶಿಸ್ತು ಸಮಿತಿ ಉಚ್ಚಾಟನಾ ಪತ್ರದಲ್ಲಿ ಉಲ್ಲೇಖಿಸಿದೆ.. “ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕರಾಗಿರುವ ಶಿವರಾಮ…

Read More