ಮಂಗಳೂರು: ಪ್ರಚೋದನಕಾರಿ ಪೋಸ್ಟ್ – 4ಇನ್ ಸ್ಟಾ ಗ್ರಾಂ, 1ಫೇಸ್‌ಬುಕ್‌ ಖಾತೆ ರದ್ದು

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಸಮಾಜದ ವಿವಿಧ ಧರ್ಮ ಹಾಗೂ ವರ್ಗಗಳ ಜನರಲ್ಲಿ ದ್ವೇಷದ ಭಾವನೆ ಹುಟ್ಟು ಹಾಕಿ ಅಪರಾಧ ಕೃತ್ಯ ಎಸಗುವಂತೆ ಪೋಸ್ಟ್ ಮಾಡುತ್ತಿದ್ದ 4 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜ್‌ಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಈ ಪೇಜ್‌ಗಳನ್ನು ಡಿಆ್ಯಕ್ಟಿವೇಟ್ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. vhp_bajrangadal_ashoknagar ಮತ್ತು shankha_nada ಎಂಬ 2 ಇನ್‌ಸ್ಟಾಗ್ರಾಂ ಪೇಜ್‌ಗಳ ವಿರುದ್ದ ಉರ್ವ ಮತ್ತು dj bharath 2008, ಎಂಬ ಇನ್‌ಸ್ಟಾಗ್ರಾಂ ಪೇಜ್ ವಿರುದ್ದ ಕಾವೂರು ಹಾಗೂ…

Read More

ಕರ್ನಾಟಕದಲ್ಲಿ ಮತ್ತೆ ಕೋವಿಡ್ ಹಾವಳಿ: ಸೋಂಕಿಗೆ ಮೊದಲ ಬಲಿ

ಬೆಂಗಳೂರು: ದೇಶದಲ್ಲಿ ಮತ್ತೆ ಕೊರೊನಾ ವೈರಸ್ (Covid-19)​ ಹಾವಳಿ ಆರಂಭವಾಗಿದೆ. ರಾಜ್ಯದಲ್ಲಿಯೂ ನಿಧಾನವಾಗಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಶನಿವಾರ (ಮೇ 24) ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ (Covid in Karnataka). ಕೊರೊನಾ ಸೋಂಕಿಗೆ ಒಳಗಾಗಿದ್ದ ಬೆಂಗಳೂರಿನ 85 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲೇ ಇದೆ. ಇನ್ನು ವಿಜಯನಗರ ಜಿಲ್ಲೆಯಲ್ಲಿ ಒಬ್ಬರಿಗೆ, ಮೈಸೂರಿನಲ್ಲಿ ಇಬ್ಬರಿಗೆ ಮತ್ತು ಬೆಂಗಳೂರು ಗ್ರಾಮಂತರದಲ್ಲಿ ಇಬ್ಬರಿಗೆ ಕೊರೊನಾ…

Read More

ದ.ಕ ಜಿಲ್ಲೆಯಲ್ಲಿ ನಾಳೆ ಸಂಜೆ 5ರವರೆಗೆ ಮದ್ಯದಂಗಡಿ ಬಂದ್

ಮಂಗಳೂರು: ದ.ಕ ಜಿಲ್ಲೆಯ ಏಳು ಗ್ರಾ.ಪಂ ಗಳ ಏಳು ಕ್ಷೇತ್ರಗಳಲ್ಲಿ ನಾಳೆ ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯದಂಗಡಿ ಮುಚ್ಚಲು ದ.ಕ ಡಿಸಿ ಆದೇಶ ಹೊರಡಿಸಿದ್ದಾರೆ. ನಾಳೆ ಸಂಜೆ ಐದು ಗಂಟೆಯವರೆಗೆ ಉಳ್ಳಾಲದ ಕಿನ್ಯಾ, ಮುನ್ನೂರು, ಬಂಟ್ವಾಳದ ವಿಟ್ಲ ಮುಡೂರು, ಬಾಳ್ತಿಲ, ಬೆಳ್ತಂಗಡಿಯ ಹೊಸಂಗಡಿ, ಪುದುವೆಟ್ಟು ಗ್ರಾಮದಲ್ಲಿ ಮದ್ಯದಂಗಡಿ ಮುಚ್ಚಲಾಗಿದೆ. ಅಷ್ಟೇ ಅಲ್ಲದೆ ಸುಳ್ಯದ ಕನಕಮಜಲು ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿಗಳನ್ನು, ಮದ್ಯ ತಯಾರಿಕಾ ಘಟಕಗಳನ್ನು ಅಲ್ಲದೆ ಶೇಂದಿ…

Read More

 ಕರ್ನಾಟಕ ಸೇರಿದಂತೆ ದೇಶಾದ್ಯಂತ ‘ಕೊರೊನಾ ಸೋಂಕು’ ಹೆಚ್ಚಳ : ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಸಿದ್ಧವಾಗಿಡಲು ಸೂಚನೆ.!

ಕೋವಿಡ್-19 ಭಾರತದ ನಗರ ಕೇಂದ್ರಗಳಲ್ಲಿ ನಿಧಾನವಾಗಿ ಮರಳುತ್ತಿರುವಂತೆ ತೋರುತ್ತಿದೆ, ಇದು ದೆಹಲಿ, ಕರ್ನಾಟಕ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಲು ಪ್ರೇರೇಪಿಸಿದೆ. ದೆಹಲಿ, ಮಹಾರಾಷ್ಟ್ರ, ಕೇರಳ, ತಮಿಳುನಾಡು ಮತ್ತು ಕರ್ನಾಟಕ ಈ ತಿಂಗಳು ಎಲ್ಲಾ ಹೊಸ ಪ್ರಕರಣಗಳನ್ನು ವರದಿ ಮಾಡಿವೆ. ವಾಸ್ತವವಾಗಿ, ರಾಷ್ಟ್ರ ರಾಜಧಾನಿಯಲ್ಲಿ ಮೂರು ವರ್ಷಗಳಲ್ಲಿ ಮೊದಲ ಬಾರಿಗೆ ಕೊರೊನಾವೈರಸ್ ಪ್ರಕರಣಗಳು (23) ವರದಿಯಾಗಿವೆ ಎಂದು ಪಿಟಿಐ ವರದಿ ಮಾಡಿದೆ. ಆದಾಗ್ಯೂ, ಹೆಚ್ಚಿನ ಪ್ರಕರಣಗಳು ಸೌಮ್ಯವಾಗಿರುತ್ತವೆ ಮತ್ತು ತೀವ್ರತೆಗೆ ಸಂಬಂಧಿಸಿಲ್ಲ….

Read More

ಬೆಳ್ತಂಗಡಿ: ರಿಕ್ಷಾ ಮತ್ತು ಪಿಕಪ್ ಢಿಕ್ಕಿ-ಇಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ: ರಿಕ್ಷಾ ಮತ್ತು ಪಿಕಪ್ ಢಿಕ್ಕಿಯಾದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ತು ಎಂಬಲ್ಲಿರುವ ಕಿರು ಸೇತುವೆ ಬಳಿ ಗುರುವಾರ ಸಂಜೆ ನಡೆದಿದೆ. ರಿಕ್ಷಾ ಚಾಲಕ ಮುಂಡಾಜೆ ಗ್ರಾಮದ ಮೂಲಾರು ನಿವಾಸಿ ಕುಶಾಲಪ್ಪ ದೇವಾಂಗ (42) ಅವರ ಕಾಲಿಗೆ ಗಂಭೀರ ಗಾಯವಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕಪ್‌ನಲ್ಲಿದ್ದ ಕೊಕ್ಕಡದ ಡೀಕಯ್ಯ (43) ಎಂಬವರ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ…

Read More

ರಷ್ಯಾದಲ್ಲಿ ಭಾರತದ ನಿಲುವು ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್‌ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ. ರಷ್ಯಾಕ್ಕೆ ಆಗಮಿಸಿದ ಐವರು ಸಂಸದರನ್ನು ಒಳಗೊಂಡ ಈ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿಗಳು ಬರಮಾಡಿಕೊಂಡಿದ್ದರು. ನಂತರ ರಷ್ಯಾದಲ್ಲಿನ ಭಾರತದ ರಾಯಭಾರಿ ವಿನಯ್ ಕುಮಾರ್ ಅವರು ಸರ್ವಪಕ್ಷ ಸಂಸದೀಯ ನಿಯೋಗದ ಜತೆಗೆ…

Read More

ಮಂಗಳೂರಿನ ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ..!!

ಮಂಗಳೂರು: ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ ರವರು ಹಾಗು ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ. ಎನ್ ರವರು ಸಿಬ್ಬಂದಿಯವರೊಂದಿಗೆ ಮಂಗಳೂರಿನ ಪಿಲಿಕುಳಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದು. ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳು ಕಂಡುಬಂದಿದ್ದು, ಮುಖ್ಯವಾಗಿ ಮೃಗಾಲಯದಿಂದ ಹೆಚ್ಚಿನ ಆದಾಯ ಬರುತ್ತಿದ್ದರು ಕೂಡ ಪ್ರಾಧಿಕಾರವು ಮೃಗಾಲಯದ ಏಳಿಗೆಗೆ ಹಣವನ್ನು ವೆಚ್ಚ ಮಾಡುತ್ತಿರುವುದು ಕಂಡುಬರುವುದಿಲ್ಲ. ಅಲ್ಲಿನ ಸಿಬ್ಬಂದಿಯವರಿಗೆ ಕಡಿಮೆ ವೇತನ ನೀಡುತ್ತಿದ್ದು,…

Read More

ಬೆಳ್ತಂಗಡಿ: ಜಾತಿ ನಿಂದನೆ ಮಾಡಿ ಯುವಕನಿಗೆ ಕೊಲೆ ಬೆದರಿಕೆ- ಇಬ್ಬರ ಬಂಧನ

ಬೆಳ್ತಂಗಡಿ: ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಎಂಬವರು ಬಂಧಿತ ಆರೋಪಿಗಳು. ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ದರು. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಹಾಗೂ ತಿಮ್ಮಪ್ಪ ಪೂಜಾರಿ ಕಬ್ಬಿಣದ ಸಲಾಕೆಯನ್ನು…

Read More

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ. ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸೀಮಂತದ ಸಂಭ್ರದಲ್ಲಿ ಕುಟುಂಬದಲ್ಲಿ…

Read More

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ NIAಗೆ ನೀಡಲು ಆಗ್ರಹಿಸಿ ಮೇ 25 ರಂದು ಜನಾಗ್ರಹ ಸಭೆ

ಮಂಗಳೂರು: ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ ಐಎ ಗೆ ನೀಡಲು ಆಗ್ರಹಿಸಿ ಮೇ 25 ರಂದು ಬಜಪೆಯಲ್ಲಿ ಜನಾಗ್ರಹ ಸಭೆ ನಡೆಸಲು ವಿಶ್ವ ಹಿಂದೂ ಪರಿಷತ್ ಭಜರಂಗದಳ ತಿಳಿಸಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಎಚ್ ಪಿ ಮುಖಂಡ ಪುರುಷೋತ್ತಮ್ ಜೋಗಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ ಐಎ ಗೆ ವಹಿಸಲು ಆಗ್ರಹಿಸಿ ಜನಾಗ್ರಹ ಸಭೆ ಮತ್ತು ಶ್ರದಾಂಜಲಿ ಸಭೆ ಬಜ್ಪೆಯಲ್ಲಿ ನಡೆಯಲಿದೆ ಎಂದು. ಮೇ 25 ರಂದು ಬಜ್ಪೆಯ…

Read More