ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು, ಓರ್ವನ ಸ್ಥಿತಿ ಗಂಭೀರ..!

ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕಾಞಾಂಗಾಡ್ ನ ಮಾಣಿಕ್ಕೋತ್‌ನಲ್ಲಿ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11) ಮೃತಪಟ್ಟ ಮಕ್ಕಳು. ಅನ್ವರ್ ನ ಸಹೋದರ ಹಾಶಿಮ್ ನನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾಣಿ ಕ್ಕೋತ್ ಪಾಲೆಕ್ಕಿ ಮಸೀದಿಯ ಕೆರೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿದು ನಾಗರಿಕರು, ಅಗ್ನಿ ಶಾಮಕ ದಳದ…

Read More

ಮಂಗಳೂರು: ಮದುವೆ ವಿಚಾರಕ್ಕೆ ನಡೆದ ಗಲಾಟೆ, ಕೊಲೆಯಲ್ಲಿ ಅಂತ್ಯ..!

ಮಂಗಳೂರು: ಮದುವೆ ವಿಚಾರಕ್ಕೆ ನಡೆದ ಗಲಾಟೆ, ವ್ಯಕ್ತಿಯ ಕೊಲೆಯಲ್ಲಿ  ಅಂತ್ಯವಾಗಿರುವಂತಹ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ತಡರಾತ್ರಿ ನಡೆದಿದೆ. ಚಾಕುವಿನಿಂದ ಇರಿದು ವಾಮಂಜೂರು ನಿವಾಸಿ ಸಲ್ಮಾನ್(50) ಎಂಬಾತನನ್ನು ಸಂಬಂಧಿ ಮುಸ್ತಾಫನಿಂದ ಕೊಲೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಸಲ್ಮಾನ್​ನ ಇಬ್ಬರ ಪುತ್ರರಾದ ರಿಯಾಬ್​, ಸಿಯಾಬ್​​ ಮೇಲೂ ಹಲ್ಲೆ ನಡೆಸಿ ಮುಸ್ತಾಫ ಪರಾರಿ ಆಗಿದ್ದಾನೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸಂಬಂಧಿ ಮುಸ್ತಫ ಎಂಬವರ ಮದುವೆಯನ್ನು ಸಲ್ಮಾನ್ ನೆರವೇರಿಸಿದ್ದ. ಇವರಿಬ್ಬರ ನಡುವೆ ಮದುವೆ ಸಂದರ್ಭದಲ್ಲಿ ವೈಮನಸ್ಸು ಉಂಟಾಗಿತ್ತು. ಇದೇ…

Read More

ಪುತ್ತೂರು: ಕೋಣೆಯಲ್ಲಿ ಕೂಡಿ ಹಾಕಿ ಮಹಿಳೆಯ ದಿಗ್ಭಂಧನ- ಪೊಲೀಸರಿಂದ ಮಹಿಳೆಯ ರಕ್ಷಣೆ

ಪುತ್ತೂರು: ನಗರದ ಪರ್ಲಡ್ಕದಲ್ಲಿ ಹಿಂದೂ ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಮಾಡಿದ ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮಾಹಿತಿ ತಿಳಿಸಿದ ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಪರ್ಲಡ್ಕ ಎಂಬಲ್ಲಿ  ವ್ಯಕ್ತಿಯೊಬ್ಬ ದಿಗ್ಭಂಧನ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ವೈಶ್ಯಾವಾಟಿಕೆ ಶಂಕೆ ವ್ಯಕ್ತವಾಗಿದೆ. ಪುತ್ತೂರು ನಗರ ಪೋಲೀಸರು ಮಹಿಳೆಯ ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಪಾಕಿಸ್ತಾನಕ್ಕೆ ಭಾರತದ ಒಂದು ಹನಿ ನೀರು ಸಿಗುವುದಿಲ್ಲ : ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಘರ್ಜನೆ

ಬಿಕಾನೆರ್ : ಏಪ್ರಿಲ್ 22 ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತ 22 ನಿಮಿಷಗಳಲ್ಲಿ ಸೇಡು ತೀರಿಸಿಕೊಂಡಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜಸ್ಥಾನ ಬಿಕಾನೆರ್‌ನ ದೇಶ್ನೋಕ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ,  ಭಾರತದ ರಕ್ತದೊಂದಿಗೆ ಆಟವಾಡಿದ್ದಕ್ಕಾಗಿ ಪಾಕಿಸ್ತಾನ ಬೆಲೆ ತೆರಬೇಕಾಗುತ್ತದೆ. ಇದು ಭಾರತದ ನಿರ್ಣಯ ಮತ್ತು ಈ ನಿರ್ಣಯದಿಂದ ನಮ್ಮನ್ನು ಅಲುಗಾಡಿಸಲು ವಿಶ್ವದ ಯಾವುದೇ ಶಕ್ತಿಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪಾಕಿಸ್ತಾನದ ಸೇನೆ ಮತ್ತು ಆರ್ಥಿಕತೆಯು ಪ್ರತಿಯೊಂದು ಭಯೋತ್ಪಾದಕ ದಾಳಿಗೆ ಬೆಲೆ ತೆರಬೇಕಾಗುತ್ತದೆ… ಪಾಕಿಸ್ತಾನ ಬಿಕಾನೆರ್‌ನ…

Read More

ಕನ್ನಡವನ್ನೇ ಮಾತಾಡಲ್ಲ ಎಂದ ಎಸ್‌ಬಿಐ ಮಹಿಳಾ ಮ್ಯಾನೇಜರ್‌: ಕನ್ನಡಿಗರ ಆಕ್ರೋಶ  ಬೆನ್ನಲ್ಲೇ ವರ್ಗಾವಣೆ 

ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್‌ಬಿಐ ಮಹಿಳಾ ಮ್ಯಾನೇಜರ್‌ ನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕನ್ನಡಿಗರ ಹೋರಾಟಕ್ಕೆ ಹೆದರಿ ರಾತ್ರೋರಾತ್ರಿ ಮ್ಯಾನೇಜರ್‌ನನ್ನು ಟ್ರಾನ್ಸ್‌ಫರ್ ಮಾಡಲಾಗಿದೆ. ಮಹಿಳಾ ಮ್ಯಾನೇಜರ್‌ನನ್ನು ಹೊರ ರಾಜ್ಯಕ್ಕೆ ವರ್ಗಾವಣೆಗೊಳಿಸುವಂತೆ ಆದೇಶ ನೀಡಲಾಗಿದೆ ಎಂದು ಎಸ್‌ಬಿಐ ಮೂಲಗಳು ತಿಳಿಸಿವೆ. ಗ್ರಾಹಕರೊಬ್ಬರು ಕೆಲಸದ ನಿಮಿತ್ತ ಬೆಂಗಳೂರು ಹೊರವಲಯದ ಚಂದಾಪುರ ಎಸ್‌ಬಿಐ ಬ್ಯಾಂಕ್‌ಗೆ ಹೋದಾಗ ಕನ್ನಡ ಮಾತನಾಡುವಂತೆ ಮಹಿಳಾ ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದ್ದಾರೆ. ಆದರೆ ಕನ್ನಡ ಮಾತನಾಡಲು ಒಪ್ಪದ ಮಹಿಳಾ ಮ್ಯಾನೇಜರ್…

Read More

ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕನಿಗೆ ಗಂಭೀರ ಗಾಯ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಗಾಯಗೊಂಡ ಚಾಲಕನನ್ನು ಉತ್ತರ ಪ್ರದೇಶದ ನಿವಾಸಿ ರಾಕೇಶ್ ಯಾದವ್ (45) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್, ಕೊಡ್ಯಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ…

Read More

ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಮಡಿದವರಿಗೆ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

ಮಂಗಳೂರು: ಹದಿನೈದು (2010ರ ಮೇ 22) ವರ್ಷಗಳ ಹಿಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನ ದುರಂತಲ್ಲಿ ಮಡಿದವರಿಗೆ ದ.ಕ. ಜಿಲ್ಲಾಡಳಿತದಿಂದ ಇಂದು ಬೆಳಗ್ಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಯಾಣಿಕರ ಸ್ಮರಣಾರ್ಥ ತಣ್ಣೀರುಬಾವಿ ಬಳಿಯ ನಿರ್ಮಿಸಲಾಗಿರುವ ಸ್ಮಾರಕದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪ್ರಭಾರ ಜಿಲ್ಲಾಧಿಕಾರಿಯಾಗಿರುವ ಜಿಪಂ ಸಿಇಒ ಡಾ.ಆನಂದ್, ಮಂಗಳೂರು ಮನಪಾ ಆಯುಕ್ತ ರವಿಚಂದ್ರ ನಾಯಕ್, ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಡಾ.ಅರುಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದು…

Read More

CISF ನಲ್ಲಿ ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಭರ್ಜರಿ ಸಿಹಿಸುದ್ದಿ ನೀಡಿದ್ದು, ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಬಂಪರ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಜಿ ಪ್ರಕ್ರಿಯೆಯು ಮೇ 18 ರ ಭಾನುವಾರದಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://cisfrectt.cisf.gov.in/ ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 6, 2025. ಇದಾದ ನಂತರ ಅರ್ಜಿ ನಮೂನೆಗಳನ್ನು ಸ್ವೀಕರಿಸಲಾಗುವುದಿಲ್ಲ. ಕ್ರೀಡಾ…

Read More

ಅಂಬ್ಯುಲೆನ್ಸ್ ಹಾಗೂ ಕಾರು ನಡುವೆ ಭೀಕರ ಅಪಘಾತ..!ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ

ಕಾಸರಗೋಡು: ಅಂಬ್ಯುಲೆನ್ಸ್ ಹಾಗೂ ಕಾರು ನಡುವೆ ಉಂಟಾದ ಅಪಘಾತದಲ್ಲಿ ಚಿಕಿತ್ಸೆಗೆ ತೆರಳುತ್ತಿದ್ದ ಓರ್ವ ಮಹಿಳೆ ಮೃತಪಟ್ಟು, ಏಳು ಮಂದಿ ಗಾಯಗೊಂಡ ಘಟನೆ ಉಪ್ಪಳ ಗೇಟ್ ಸಮೀಪ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಶಾಹೀನಾ (48) ಹಾಗೂ ಗಾಯಗೊಂಡವರರನ್ನು ಶಾಹೀನಾ ಅವರ ಪುತ್ರಿ ರಿಯಾ ಫಾತಿಮಾ (9), ಸಹೋದರಿ ಶಜಿನಾ (45), ಸಂಬಂಧಿಕ ಆಸೀಫ್ (22), ಅಂಬ್ಯುಲೆನ್ಸ್‌ ಚಾಲಕ ಅಕ್ರಂ (38) ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗೆಂದು ಕಣ್ಣೂರಿನ ಆಸ್ಪತ್ರೆಯಿಂದ ಮಂಗಳೂರಿಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ ಅಪಘಾತಕ್ಕೀಡಾಗಿ ಮಗುಚಿಬಿದ್ದಿದೆ. ಗಂಭೀರ…

Read More

 ವಿಟ್ಲ: ಪೆಟ್ರೋಲ್ ಹಾಕಿ ಹಣ ನೀಡದೆ ಯಾಮಾರಿಸಿದ ಆಲ್ಟೋ ಕಾರು ಅಪಘಾತ..!!

ವಿಟ್ಲ: ಮದ್ಯ ಸೇವಿಸಿ ಆಲ್ಟೋ ಕಾರಿನಲ್ಲಿ ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಹಣ ನೀಡದೆ ಸಾಲೆತ್ತೂರು ಮೂಲಕ ಇಬ್ಬರು ಯುವಕರು ಪರಾರಿಯಾಗಿದ್ದು, ಸಮೀಪದ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಮೇ 20ರಂದು ನಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಅವರಿಗೆ ಗಂಭೀರ ಗಾಯಗಳಾಗಿವೆ. ಆಲ್ಟೋ ಕಾರಿನಲ್ಲಿದ್ದ ಇಬ್ಬರು ಮದ್ಯವ್ಯಸನಿಗಳಾಗಿದ್ದು, ಹಿಂದಿ ಭಾಷೆ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಕಾರು…

Read More