ನಾವು ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡ್ತೀವಿ ಅಂತ ಹೇಳಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ನಾವು ಎಲ್ಲಿಯೂ ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳೂ ಕೊಡ್ತೀವಿ ಅಂತ ಹೇಳಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ. ನಗರದಲ್ಲಿನ ಕಾಂಗ್ರೆಸ್ ಸಾಧನಾ ಸಮಾವೇಶದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರಿಗೆ ಗೃಹ ಲಕ್ಷ್ಮೀ ಹಣ ಯಾವಾಗ ಬರುತ್ತೆ ಎಂಬುದಾಗಿ ಪತ್ರಕರ್ತರೊಬ್ಬರು ಪ್ರಶ್ನಿಸಿದರು. ಆಗ ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು. ನಾವು ದುಡ್ಡು ಕೊಡ್ತಾ ಇರಬೇಕು ಎಂದರು. ಈಗ ಗುತ್ತಿಗೆ ಕೆಲಸ…

