ಹೋಟೆಲ್ ನ ಡಿಸ್ಪ್ಲೇ ಬೋರ್ಡ್ ನಲ್ಲಿ ಕನ್ನಡಿಗರ ಬಗ್ಗೆ ಅವಹೇಳನ ಪ್ರಕರಣ : ಇಬ್ಬರ ವಿರುದ್ಧ ‘FIR’ ದಾಖಲು

ಬೆಂಗಳೂರು : ಕೋರಮಂಗಲದಲ್ಲಿರುವ ಜಿಎಸ್ ಸೂಟ್ಸ್ ಹೋಟೆಲ್ ಡಿಸ್‌ಪ್ಲೇ ಬೋರ್ಡ್​ನಲ್ಲಿ ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿ ಅವಮಾನ ಮಾಡಿರು ಘಟನೆ ನಡೆದಿದೆ.ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಕನ್ನಡಿಗರ ಭಾವನೆಗಳಿಗೆ ಧಕ್ಕೆ, ಸಮಾಜದಲ್ಲಿ ಪರಸ್ಪರ ವೈ ಮನಸು ಸೃಷ್ಟಿ,ಹಾಗು ಶಾಂತಿ ಭಂಗ ಉಂಟು ಮಾಡಲು ಯತ್ನಿಸಿದ ಆರೋಪದ ಅಡಿ FIR ದಾಖಲಿಸಲಾಗಿದೆ. ಹೌದು ಹೋಟೆಲ್ ನ ಡಿಸ್ಪ್ಲೇ ಬೋರ್ಡ್ ನಲ್ಲಿ ಕನ್ನಡಿಗರ ಬಗ್ಗೆ ಅವಹೇಳನ ಪ್ರಕರಣಕ್ಕೆ…

Read More

ಅಕ್ರಮ ಮದ್ಯ ವಶ: ಆರೋಪಿ ಅರವಿಂದ ಭಂಡಾರಿ ಪರಾರಿ..!

ಕಾಸರಗೋಡು: ಬದಿಯಡ್ಕ ಬೇಳ ಗ್ರಾಮದ ಮಾನ್ಯ ಆಲಂಪಾಡಿ ರಸ್ತೆ ಬಳಿ ಮುಂಡೋಡಿನಲ್ಲಿ ಕಾಸರಗೋಡು ಅಬಕಾರಿ ದಳ ನಡೆಸಿದ ಕಾರ್ಯಾಚರಣೆಯಲ್ಲಿ 95.04 ಲೀಟರ್ ಮಧ್ಯವನ್ನು ಹಾಗೂ ಮದ್ಯ ಸಾಗಟದ ಕಾರನ್ನು ವಶಪಡಿಸಿಕೊಂಡಿದೆ. ಕಾರಿನಲ್ಲಿ ಮಧ್ಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಆರೋಪಿ ಕುಂಜತ್ತೂರು ಶಾರದ ನಿವಾಸದ ಅಣ್ಣು ಯಾನೆ ಅರವಿಂದ ಭಂಡಾರಿ (44) ಪರಾರಿಯಾಗಿದ್ದಾನೆ. ಆರೋಪಿಯ ಪತ್ತೆಗಾಗಿ ಅಬಕಾರಿಗಳ ಪೊಲೀಸರು ಬಲೆ ಬೀಸಿದ್ದಾರೆ.

Read More

ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಉಗ್ರರ ಸೆರೆ..!

ನವದೆಹಲಿ: ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಪುಣೆಯ ಐಸಿಸ್ ಮಾಡ್ಯೂಲ್ ಪ್ರಕರಣದ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಅಬ್ದುಲ್ಲಾ ಫಯಾಜ್ ಶೇಖ್ ಮತ್ತು ತಲ್ಹಾ ಲಿಯಾಕತ್ ಖಾನ್ ಎಂಬವರನ್ನು ಇಂಡೋನೇಷ್ಯಾದಲ್ಲಿ ಬಂಧಿಸಿ ಭಾರತಕ್ಕೆ ರವಾನಿಸಲಾಗಿದ್ದು, ಮುಂಬಯಿಯಲ್ಲಿ ಬಂಧಿಸಲಾಗಿದೆ. ಅವರನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮಹಾರಾಷ್ಟ್ರ, ಗುಜರಾತ್ ಮತ್ತು ಭಾರತದ ಇತರ ಭಾಗಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಐಸಿಸ್ ಪ್ರಾಯೋಜಿತ ಪಿತೂರಿಯಲ್ಲಿ ಇಬ್ಬರೂ ತೊಡಗಿದ್ದರು. ಐಇಡಿ ಸ್ಫೋಟದ ಕಾರ್ಯಾಗಾರಗಳನ್ನು ಆಯೋಜಿಸುವುದು, ಗುಂಡು ಹಾರಿಸುವ ಅಭ್ಯಾಸಕ್ಕಾಗಿ ಸ್ಥಳಗಳನ್ನು ಹುಡುಕುವುದು ಮತ್ತು…

Read More

ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು

ರೈಲ್ವೆ ಕಾಮಗಾರಿ ಹಿನ್ನೆಲೆ ಬೆಂಗಳೂರು – ಮಂಗಳೂರು, ಬೆಂಗಳೂರು – ಕಾರವಾರ ನಡುವೆ ಸಂಚಾರ ನಡೆಸುತ್ತಿದ್ದ 6 ರೈಲುಗಳು ಮುಂದಿನ 5 ತಿಂಗಳು ಸಂಪೂರ್ಣ ರದ್ದಾಗುತ್ತಿವೆ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಮಂಗಳೂರು –…

Read More

ಬಂಟ್ವಾಳ : ನಾಲ್ಕು ಮಂದಿಯ ತಂಡದಿಂದ ಯುವಕನಿಗೆ ಚೂರಿ ಇರಿತ….!

ಬಂಟ್ವಾಳ : ನಾಲ್ಕು ಮಂದಿಯ ತಂಡವೊಂದು ಯುವಕನೋರ್ವನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್ ಯಾನೆ ಅಮ್ಮಿ ಎಂದು ಗುರುತಿಸಲಾಗಿದೆ. ಇರಿತದಿಂದ ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ಸದ್ಯಕ್ಕೆ…

Read More

ಭಾರತೀಯ ಸೇನೆಯ ಎನ್ಕೌಂಟರ್ ನಲ್ಲಿ ಮೋಸ್ಟ್ ವಾಂಟೇಡ್ ಉಗ್ರ `ಶಾಹಿದ್ ಕುಟ್ಟೆ’ ಸೇರಿ 6 ಉಗ್ರ ಹತ್ಯೆ : ಭಾರತೀಯ ಸೇನೆ ಮಾಹಿತಿ

ಶ್ರೀನಗರ : ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಶಾಹಿದ್ ಕುಟ್ಟೆ ಸೇರಿ 6 ಮಂದಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸೇನೆ, ಇತ್ತೀಚಿನ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳಲ್ಲಿ ಕಳೆದ 48 ಗಂಟೆಗಳಲ್ಲಿ ನಾವು ಎರಡು ಅತ್ಯಂತ ಯಶಸ್ವಿ ಕಾರ್ಯಾಚರಣೆಗಳನ್ನು ನಡೆಸಿದ್ದೇವೆ. ಈ ಎರಡು ಕಾರ್ಯಾಚರಣೆಗಳನ್ನು ಶೋಪಿಯಾನ್ ಮತ್ತು ಟ್ರಾಲ್ ಪ್ರದೇಶಗಳ ಕೇಲಾರ್‌ನಲ್ಲಿ ನಡೆಸಲಾಯಿತು, ಇದರ ಪರಿಣಾಮವಾಗಿ ಒಟ್ಟು ಆರು ಭಯೋತ್ಪಾದಕರನ್ನು ತಟಸ್ಥಗೊಳಿಸಲಾಯಿತು….

Read More

ಪುತ್ತೂರು: ಬಜರಂಗದಳ ಜಿಲ್ಲಾ ಸಂಯೋಜಕ್ ಭರತ್‌ ಕುಂಮ್ಡೇಲು ವಿರುದ್ದ ಪ್ರಕರಣ ದಾಖಲು..!

ಪುತ್ತೂರು: ಪುತ್ತೂರು ತಾಲೂಕಿನ ಪುತ್ತೂರು ಕಸಬಾ ಗ್ರಾಮದ ಬೈಪಾಸ್ ರಸ್ತೆಯಲ್ಲಿರುವ ಜೈನ್ ಭವನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ಭಾಷಣ ಮಾಡಿದ ಆರೋಪದ ಮೇಲೆ ಬಲಪಂಥೀಯ ನಾಯಕ ಭರತ್ ಕುಮ್ಡೇಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 15 ರ ಸಂಜೆ ಈ ಘಟನೆ ನಡೆದಿದೆ. ಆರೋಪಿಗಳು ಮಾಡಿದ ಭಾಷಣವು ಸಾರ್ವಜನಿಕ ಶಾಂತಿ ಮತ್ತು ಸಾಮರಸ್ಯವನ್ನು ಭಂಗಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ನಂತರ, ಪುತ್ತೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 35/2025 ರ ಅಡಿಯಲ್ಲಿ…

Read More

ಸುಹಾಸ್‌ ಶೆಟ್ಟಿ ಹತ್ಯೆಯಲ್ಲಿ ಪಿಎಫ್‌ಐ ಕೈವಾಡ – ಡಾ.ಭರತ್‌ ಶೆಟ್ಟಿ

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಸಂಚಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಕೆ.ಎಫ್.ಡಿ ಹಾಗೂ ಪಿ.ಎಫ್.ಐ ಕೈವಾಡ ಇರುವುದು ಬಯಲಾಗಿದೆ. ಎರಡು ದಿನದ ಹಿಂದೆ ಬಂಧಿತನಾಗಿರುವ ನೌಶಾದ್ ಕೆ.ಎಫ್.ಡಿ ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದ ಎಂದು ಮಘಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ಹೇಳಿದ್ದಾರೆ. ಹಿಂದೂ ಸಂಘಟನೆಯ ಪ್ರಮುಖ ಕಾರ್ಯಕರ್ತ ಸುಖಾನಂದ ಶೆಟ್ಟಿ ಅವರನ್ನು ಹತ್ಯೆ ಮಾಡಿರುವುದು ಇದೇ ಕೆ.ಎಫ್.ಡಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ನೌಶಾದ್ ಮತ್ತು ಅವನ ಸಹಚರರು. ಇಷ್ಟು ಮಾತ್ರವಲ್ಲದೆ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ…

Read More

ಮಂಗಳೂರು: ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ಹಡಗು ಮುಳುಗಡೆ

ಮಂಗಳೂರು: ನಗರದ ಬಂದರ್‌ ನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ʼಎಂಎಸ್‌ವಿ ಸಲಾಮತ್ʼ ಎಂಬ ಹೆಸರಿನ ಸರಕು ಸಾಗಣೆಯ ಹಡಗು ಕರ್ನಾಟಕ ಕರಾವಳಿಯ ಮಂಗಳೂರಿನ ನೈರುತ್ಯಕ್ಕೆ ಸುಮಾರು 60 ನಾಟಿಕಲ್ ಮೈಲು ದೂರದಲ್ಲಿ ಬುಧವಾರ ಮುಂಜಾನೆ ಮುಳುಗಡೆಯಾಗಿದೆ. ಹಡಗಿನಲ್ಲಿದ್ದ 6 ಮಂದಿ ಸಿಬಂದಿಯನ್ನು ಕೋಸ್ಟ್‌ಗಾರ್ಡ್ ರಕ್ಷಿಸಿದೆ. ಮೇ 12ರಂದು ಈ ಹಡಗು ಮಂಗಳೂರು ಬಂದರ್‌ ನಿಂದ ಲಕ್ಷದ್ವೀಪಕ್ಕೆ ಸಿಮೆಂಟ್, ಕಟ್ಟಡ ಸಾಮಗ್ರಿಯನ್ನು ಒಳಗೊಂಡ ಸರಕುಗಳನ್ನು ಹೇರಿಕೊಂಡು ಸಾಗುತ್ತಿತ್ತು. ಮೇ 18ರಂದು ಕಡ್ಮತ್ ದ್ವೀಪವನ್ನು ತಲುಪುವ ನಿರೀಕ್ಷೆಯಿತ್ತು. ಆದರೆ ಮೇ 14ರ ಮುಂಜಾನೆ…

Read More

SBI ನಲ್ಲಿ 3,323 ಹುದ್ದೆಗಳಿಗೆ ಅರ್ಜಿ ಆಹ್ವಾನ 

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿಸುದ್ದಿ ನೀಡಿದ್ದು,SBI ವೃತ್ತ ಆಧಾರಿತ ಅಧಿಕಾರಿಗಳ (CBO) ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಮೇ 29, 2025 ರಂದು ಅಥವಾ ಅದಕ್ಕೂ ಮೊದಲು ತಮ್ಮ ಅರ್ಜಿಗಳನ್ನು ಸಲ್ಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಭ್ಯರ್ಥಿಗಳ ಆಯ್ಕೆಯು ಹಲವಾರು ಮೌಲ್ಯಮಾಪನಗಳನ್ನು ಆಧರಿಸಿದೆ ಎಂಬುದನ್ನು ಆಸಕ್ತರು ಗಮನಿಸಬೇಕು – ಆನ್‌ಲೈನ್ ಪರೀಕ್ಷೆ, ಸ್ಕ್ರೀನಿಂಗ್, ಸಂದರ್ಶನ ಮತ್ತು ಭಾಷಾ…

Read More