ಪಾಕಿಸ್ತಾನದಲ್ಲಿರುವ ಉಗ್ರರನ್ನು ಸದೆಬಡೆಯಲು ಭಾರತ ‘ಲಕ್ಷ್ಮಣ ರೇಖೆ’ ಎಳೆದಿದೆ : ಪ್ರಧಾನಮಂತ್ರಿ ನರೇಂದ್ರ ಮೋದಿ
ಪಂಜಾಬ್ : ಆಪರೇಷನ್ ಸಿಂಧೂರ್ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಆದಂಪುರ ಏರ್ ಬೇಸ್ ಗೆ ಬೇಟಿ ನೀಡಿದ್ದಾರೆ. ಪಂಜಾಬಿನ ಆದಂಪುರ ವಾಯುನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೈನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಮತ್ತೊಮ್ಮೆ ಉಗ್ರರು ಏನಾದರೂ ದಾಳಿ ಮಾಡಿದರೆ ಭಾರತದ ಪ್ರತಿ ದಾಳಿ ಇನ್ನೂ ಘೋರವಾಗಿರುತ್ತದೆ. ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ಯಾವುದೇ ಕಾರಣಕ್ಕೂ ಹೆದರುವುದಿಲ್ಲ. ಇಡೀ ವಿಶ್ವವೇ ಭಾರತದ ಬೆಂಬಲಕ್ಕೆ ನಿಂತಿದೆ. ಉಗ್ರರು ಪಾಕಿಸ್ತಾನದೊಳಗೆ ಅಡಗಿದರು ಸಹ ನುಗ್ಗಿ ಹೊಡೆಯುತ್ತೇವೆ…

