‘ಭಾರತೀಯ ಸೇನೆಗೆ ಸೆಲ್ಯೂಟ್, ನಾವು ಒಗ್ಗಟ್ಟಿನಿಂದ ಇರುತ್ತೇವೆ’- ವಿರಾಟ್ ಕೊಹ್ಲಿ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದ ಬಿಸಿಸಿಐ 2025 ರ ಐಪಿಎಲ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಬೆನ್ನಲ್ಲೇ ಕ್ರಿಕೆಟಿಗ ವಿರಾಟ್ ಕೊಹ್ಲಿ ಭಾರತೀಯ ಸೇನೆ ಪರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ”ಈ ಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ರಕ್ಷಿಸುತ್ತಿರುವುದಕ್ಕಾಗಿ ಭಾರತೀಯ ಸೇನೆಗೆ ಸೆಲ್ಯೂಟ್. ನಾವು ನಮ್ಮ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದ ಇರುತ್ತೇವೆ. ನಮ್ಮ ವೀರ ಯೋಧರ ಅಚಲ ಧೈರ್ಯ, ಅವರು ಮತ್ತು ಅವರ ಕುಟುಂಬದವರು ನಮ್ಮ ದೇಶಕ್ಕಾಗಿ ಮಾಡುವ ತ್ಯಾಗಗಳಿಗೆ ನಾವು ಸದಾ…

Read More

ಆಧಾರ್‌ ಕೇಂದ್ರದಲ್ಲಿ ಉದ್ಯೋಗಾವಕಾಶ; ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವಿವರ:ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹುದ್ದೆ ಹೆಸರು:ಅಸಿಸ್ಟಂಟ್ ಸೆಕ್ಷನ್ ಆಫೀಸರ್ ಹುದ್ದೆಗಳ ಸಂಖ್ಯೆ:08 ಕರ್ನಾಟಕದಲ್ಲಿ ಉದ್ಯೋಗ ಸ್ಥಳ:ಬೆಂಗಳೂರು ವೇತನ:35,400- 1,12,400 ವಿದ್ಯಾರ್ಹತೆ: (Aadhar Recruitment:) ವಯೋಮಿತಿ:ಅರ್ಜಿ ಸಲ್ಲಿಸಲು ಗರಿಷ್ಠ 56 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಒಬಿಸಿ ವರ್ಗದವರಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ವರ್ಗದವರಿಗೆ 5…

Read More

ಪಾಕಿಸ್ತಾನದ JF-17 ಜೆಟ್ ವಿಮಾನವನ್ನು ಹೊಡೆದುರುಳಿಸಿದೆ ಭಾರತದ ಆಕಾಶ್ ಮಿಸೈಲ್

ನವದೆಹಲಿ: ಪಹಲ್ಗಾಮ್‌ನಲ್ಲಿ ಇಸ್ಲಾಮಿಕ್ ಉಗ್ರರು ನಡೆಸಿದ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಆಪರೇಷನ್ ಸಿಂದೂರ್‌ ನಡೆಸಿ 9 ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಸದೆಬಡಿದಿತ್ತು. ಇದರ ಬೆನ್ನಲ್ಲೇ ಪುನಃ ಭಾರತದ ಹಲವು ನಗರಗಳ ಮೇಲೆ ದಾಳಿಗೆ ವಿಫಲ ಯತ್ನ ಮಾಡಿತ್ತು. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನದ ಮೇಲೆ ಭಾರತ ದಾಳಿ ಮುಂದುವರಿಸಿದ್ದು ಇದೀಗ ಜಮ್ಮು ಕಾಶ್ಮೀರದ ಪಠಾಣ್ ಕೋಟ್ ನಲ್ಲಿ ಪಾಕಿಸ್ತಾನದ JF-17 ಜೆಟ್ ವಿಮಾನವನ್ನು ಭಾರತದ ಆಕಾಶ್…

Read More

ಪಾಕ್ ಪರ ವಿಜಯಪುರದ ವಿದ್ಯಾರ್ಥಿನಿಯಿಂದ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್; ದೂರು ದಾಖಲು

ವಿಜಯಪುರ: ಪೆಹಲ್ಗಾಮ್‌ ಭಯೋತ್ಪಾದಕ ದಾಳಿ ಮೂಲಕ ಭಾರತವನ್ನು ಕೆಣಕಿದ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದೆ.35 ನಿಮಿಷ ಡ್ರೋನ್ ದಾಳಿ ನಡೆಸಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಶಾಸ್ತಿ ಮಾಡಿದೆ. ಪಾಕಿಸ್ತಾನದ ಮಿಸೈಲ್ಗಳನ್ನು S-400 ಮಿಸೈಲ್ ಜೆಟ್ ಹೊಡೆದುರುಳಿಸಿದೆ. ಆದರೆ ಇಲ್ಲೊಬ್ಬಳು ಪಾಕ್ ಪರ ಬ್ಯಾಟ್ ಬಿಸಿದ್ದಾಳೆ.ಕರ್ನಾಟದಲ್ಲಿ ಪಾಕ್ ಪ್ರೇಮಿಗಳು ಕೂಡ ಬಾಲ ಬಿಚ್ಚಿದ್ದಾರೆ. ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್…

Read More

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್; ಭಾರಿ ಸ್ಫೋಟಕ್ಕೆ ಪಾಕ್ ತತ್ತರ

ಪಾಕಿಸ್ತಾನದ ಮೇಲೆ ಆಪರೇಶನ್ ಸಿಂಧೂರ ಕಾರ್ಯಾಚರಣೆ ಇಂದು ರಾತ್ರಿಯೂ ಮುಂದುವರೆದಿದ್ದು, ಪಾಕಿಸ್ತಾನ ಪ್ರಧಾನಿ ನಿವಾಸದ ನಿವಾಸದ ಬಳಿಯಲ್ಲೇ ಭಾರತೀಯ ಸೈನ್ಯದ ಭಾರಿ ದಾಳಿ ನಡೆದಿದೆ. ಭಾರತ ನಡೆಸಿದ ಮಿಸೈಲ್‌ ದಾಳಿಗೆ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ನಡುಗುವಂತಾಗಿದೆ. ಪಾಕ್‌ ಪ್ರಧಾನಿ ಮನೆ ಬಳಿಯೇ ದಾಳಿಯಾಗಿದೆ ಎಂದು ವರದಿಯಾಗಿದೆ.ಭಾರತದ ದಾಳಿಗೆ ಪಾಕ್‌ ಪ್ರಧಾನಿಯೂ ಬೆಚ್ಚಿದ್ದಾರೆ. ಪಾಕಿಸ್ತಾನದಲ್ಲಿ ದಿಕ್ಕು ತೋಚದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ ಬಾರದಂತೆ ಪಾಕ್‌ ನಾಗರಿಕರಿಗೆ ಅಲ್ಲಿನ ಸ್ಥಳೀಯ ಆಡಳಿತಗಳಿಂದ ಸೂಚನೆ ನೀಡಿದೆ.ಪಾಕಿಸ್ತಾನದ ಪೈಲಟ್‌ನನ್ನು ಭಾರತೀಯ ಸೇನೆ…

Read More

ಪಾಕ್‌ನಿಂದ ಶೆಲ್ ದಾಳಿ; ಭಾರತೀಯ ಯೋಧ ಹುತಾತ್ಮ

ನವದೆಹಲಿ: ಭಾರತ ಕೈಗೊಂಡ ಆಪರೇಷನ್ ಸಿಂಧೂರ್‌ ನಂತರ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ಸಡೆಸುತ್ತಿದೆ. ಪ್ರತಿಯಾಗಿ ಭಾರತೀಯ ಸೇನೆ ತಕ್ಕ ತಿರುಗೇಟು ನೀಡುತ್ತಿದೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಸೈನಿಕನೋರ್ವ ಹುತಾತ್ಮರಾಗಿದ್ದಾರೆ. ಪಾಕಿಸ್ತಾನ ಸೈನಿಕರು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು, ಮಧ್ಯರಾತ್ರಿಯ ನಂತರ ಶೆಲ್‌ಗಳು ಮತ್ತು ಮೋರ್ಟಾರ್‌ಗಳನ್ನು ಹಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸಶಸ್ತ್ರ ಪಡೆಗಳು ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿದವು. ಇದನ್ನೂ ಓದಿ: ಆಪರೇಷನ್ ಸಿಂದೂರ್ ಬೆನ್ನಲ್ಲೇ ಪಾಕ್‌ಗೆ ಮತ್ತೊಂದು ಶಾಕ್…

Read More

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಎನ್‌ಐಎ ತನಿಖೆಗೆ ಆಗ್ರಹಿಸಿ ದ.ಕ. ಉಡುಪಿ ಶಾಸಕರಿಂದ ರಾಜ್ಯಪಾಲರ ಭೇಟಿ

ಕಾರ್ಕಳ: ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಶಾಸಕರು ಮೇ 9 ರಂದು ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಯ ಹಿಂದೆ 100 ಕ್ಕೂ ಹೆಚ್ಚು ಜನರು ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂಬ ಬಲವಾದ ಅನುಮಾನವಿದೆ. ರಾಜ್ಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಣ ಹರಿದಾಡಿದೆ. ಪ್ರಕರಣದಲ್ಲಿ ಕೆಲವು ಮಂಗಳೂರು ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಆರೋಪಗಳು ಸಹ ಕೇಳಿ ಬಂದಿವೆ. ಜೊತೆಗೆ ಕೊಲೆಗೆ ಸಹಾಯ ಮಾಡಿದ…

Read More

‘ಆಪರೇಷನ್ ಸಿಂಧೂರ್’ ಬೆನ್ನಲ್ಲೇ ಕರಾವಳಿಯಲ್ಲಿ ಹೈಅಲರ್ಟ್‌ ಘೋಷಣೆ

ಮಂಗಳೂರು/ಉಡುಪಿ: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ’ಆಪರೇಷನ್ ಸಿಂಧೂರ್” ಕಾರ್ಯಾಚರಣೆ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ 324 ಕಿಮೀ ಉದ್ದದ ಕರಾವಳಿ ಪ್ರದೇಶದಲ್ಲಿ ಮಂಗಳೂರು, ಮಲ್ಪೆ, ಕಾರವಾರ, ಕುಮಟಾ, ಭಟ್ಕಳ, ಹೆಜಮಾಡಿ, ಹೊನ್ನಾವರ, ಬೇಲೆಕೇರಿ ಮತ್ತು ಗಂಗೊಳ್ಳಿಯಲ್ಲಿ ಸಿಎಸ್‌ಪಿ ಕೇಂದ್ರಗಳು ಸೇರಿವೆ. ಈ ಎಲ್ಲಾ ಕೇಂದ್ರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಒಂಬತ್ತು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 340 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅದರಲ್ಲಿ…

Read More

‘ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ ಪೋಸ್ಟ್ ಮಾಡುವ ಮುನ್ನ ಎಚ್ಚರಿಕೆ ‘- ಮಂಗಳೂರು ಪೊಲೀಸ್ ಆಯುಕ್ತರು

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಗುಂಪುಗಳು ಮತ್ತು ಇತರ ಸಾಮಾಜಿಕ ಮಾಧ್ಯಮಗಳಂತಹ ವೇದಿಕೆಗಳಲ್ಲಿ ಕೋಮು ದ್ವೇಷ, ಸುಳ್ಳು ಮಾಹಿತಿ ಮತ್ತು ಬೆದರಿಕೆ ಸಂದೇಶಗಳನ್ನು ಹರಡುವುದರ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಇಂತಹ ಅಪರಾಧಗಳ ಪ್ರಕರಣಗಳು ತೀವ್ರವಾಗಿ ಹೆಚ್ಚಿವೆ. ಪೊಲೀಸ್ ಇಲಾಖೆ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಹೇಳಿದ್ದಾರೆ. ಕಳೆದ ವಾರವೊಂದರಲ್ಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಂತಹ 30 ಕ್ಕೂ…

Read More

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಕ್ ಡ್ರಿಲ್

ಮಂಗಳೂರು: ಭಾರತ-ಪಾಕ್‌ ಪ್ರತೀಕಾರದ ಸಂಘರ್ಷದ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ ಮಾಕ್ ಡ್ರಿಲ್ ಕೈಗೊಳ್ಳಲಾಗುತ್ತಿದೆ. ಗೃಹ ಸಚಿವಾಲಯವು ಆದೇಶಿಸಿದ ರಾಷ್ಟ್ರೀಯ ಮಟ್ಟದ ನಾಗರಿಕ ಅಣಕು ಪ್ರದರ್ಶನದ ಭಾಗವಾಗಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಮೇ 7, 2025 ರಂದು ಭಾರತದಾದ್ಯಂತ ತುರ್ತು ವಿಮಾನ ನಿಲ್ದಾಣ ಸ್ಥಳಾಂತರಿಸುವ ಅಣುಕು ಪ್ರದರ್ಶನ ನಡೆಸಿತು. ವಿಮಾನ ನಿಲ್ದಾಣದ ತುರ್ತು ಕಾರ್ಯಾಚರಣೆ ಯೋಜನೆಯ ಪ್ರಕಾರ ಈ ಮಾಕ್‌ ಡ್ರಿಲ್ ಅನ್ನು ನಡೆಸಲಾಯಿತು. ವಿಮಾನ ನಿಲ್ದಾಣದ ಕಾರ್ಯಾಚರಣೆಗಳ ಮೇಲೆ ಯಾವುದೇ ಪರಿಣಾಮ ಬೀರದಂತೆ, ಎಲ್ಲಾ ವಿಮಾನ ನಿಲ್ದಾಣದ…

Read More