ಮುಸ್ಲಿಂ ಮುಖಂಡರ ಜತೆ ಗೃಹ ಸಚಿವರ ಸಭೆ: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದಿಕ್ಕುತಪ್ಪಿಸುವ ಷಡ್ಯಂತ್ರ- ಸುನೀಲ್ ಕುಮಾರ್
ಮಂಗಳೂರು ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಕುರಿತು ಮಂಗಳೂರು ಪೊಲೀಸರ ಜತೆ ಕಾನೂನು- ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಸ್ಲಿಂ ಮುಖಂಡರ ಜತೆಗೆ ಪ್ರತ್ಯೇಕ ಸಭೆ ನಡೆಸುವ ಮೂಲಕ ಈ ಹತ್ಯಾ ಪ್ರಕರಣದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸರ್ಕಾರ ಪ್ರಾರಂಭಿಸಲು ಮುಂದಾಗಿರುವ ಆ್ಯಂಟಿ ಕಮ್ಯುನಲ್ ಫೋರ್ಸ್ ಹಿಂದೂಗಳ ದಮನಕ್ಕೆ ದುರ್ಬಳಕೆಯಾಗಲಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಸಚಿವ ಪರಮೇಶ್ವರ್ ಅವರು, ಪೊಲೀಸ್ ಅಧಿಕಾರಿಗಳ ಜತೆಗೆ…

