ಮಂಗಳೂರು: ನಿರ್ಜನ ಸ್ಥಳದಲ್ಲಿ ಯುವಕನ ಶವ ಪತ್ತೆ..! ಕೊಲೆ ಶಂಕೆ

ಮಂಗಳೂರು : ನಗರದ ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ನಿರ್ಜನ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಭಾನುವಾರ ಸಂಜೆ ವೇಳೆಗೆ ಪತ್ತೆಯಾಗಿದೆ. ವ್ಯಕ್ತಿಯನ್ನು ಹಲ್ಲೈಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಸ್ಥಳೀಯರಿಗೆ ಮೃತ ವ್ಯಕ್ತಿಯ ಪರಿಚಯವಿಲ್ಲ. ಆತ ದಿನಗೂಲಿ ಕಾರ್ಮಿಕನಾಗಿರಬಹುದು ಎಂದು ಶಂಕಿಸಲಾಗಿದೆ. ಇಲ್ಲೆ ಸಮೀಪ ಕ್ರಿಕೆಟ್‌ ಪಂದ್ಯಾಟವೊಂದು ನಡೆದಿದ್ದು, ಅದನ್ನು ನೋಡಲು ಬಂದ ವ್ಯಕ್ತಿ ಕೊಲೆಯಾಗಿದ್ದಾನೆಯೇ ಎಂಬ ಅನುಮಾನವೂ ಇದೆ. ಕುಡುಪು ಕಟ್ಟೆ ಸಮೀಪದ ಗದ್ದೆಯಲ್ಲಿ ಯುವಕರ ಗುಂಪೊಂದು 6 ತಂಡಗಳ ಕ್ರಿಕೆಟ್…

Read More

ಉಗ್ರರಿಗೆ ನೆರವು ನೀಡ್ತಿದ್ದ ಕಾಶ್ಮೀರದ 64 ಆರೋಪಿಗಳ ಮನೆಗಳ ಮೇಲೆ ಪೊಲೀಸರು ದಾಳಿ

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದಲ್ಲಿ ಏಪ್ರಿಲ್ 22 ರಂದು ಪ್ರವಾಸಿಗರ ಮೇಲೆ ಉಗ್ರರು ಭೀಕರ ದಾಳಿ ನಡೆಸಿದರು. ಈ ಒಂದು ದಾಳಿಯಲ್ಲಿ 26 ಜನ ಅಮಾಯಕರು ಬಲಿಯಾಗಿದ್ದಾರೆ. ಅದರಲ್ಲಿ ಇಬ್ಬರು ಕನ್ನಡಿಗರು ಸಹ ಸಾವನ್ನಪ್ಪಿದ್ದರೆ. ಇದೀಗ ಉಗ್ರರಿಗೆ ನೆರವು ನೀಡುತ್ತಿದ್ದ 64 ಆರೋಪಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹೌದು ಗುಂಡಿನ ದಾಳಿ ನಡೆದ ಬಳಿಕ ಕಾಶ್ಮೀರದಲ್ಲಿ ಹೈ ಅಲರ್ಟ್ ಇದ್ದು, ಈಗಾಗಲೇ ಭಾರತೀಯ ಸೈನಿಕರು, ಕಾಶ್ಮೀರಿ ಪೊಲೀಸರು ಉಗ್ರರ ಮಟ್ಟ ಹಾಕಲು ಯೋಜನೆ…

Read More

 ಪುತ್ತೂರು: ಸ್ಕೂಟರ್ ಗೆ ಗುದ್ದಿದ ಲಾರಿ, ಸವಾರ ದುರ್ಮರಣ

ಪುತ್ತೂರು: ಸ್ಕೂಟರ್ ಒಂದಕ್ಕೆ ಲಾರಿಯೊಂದು ಬಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಪುತ್ತೂರಿನ ಮಾಯ್ ದೆ ದೇವುಸ್ ಚರ್ಚ್ ಎದುರು ನಿನ್ನೆ ನಡೆದಿದೆ. ಕೆಮ್ಮಿಂಜೆಯ ಫ್ರಾನ್ಸಿಸ್ ಲೂವಿಸ್ ಮೃತಪಟ್ಟ ದುರ್ದೈವಿ. ಇವರು ಕೆಮ್ಮಿಂಜೆಯಿಂದ ಪುತ್ತೂರಿನ ಚರ್ಚ್ ಕಡೆಗೆ ಬರುತ್ತಿದ್ದರು. ಇದೇ ಸಂದರ್ಭ ದರ್ಬೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಬಂದು ಸ್ಕೂಟಿಗೆ ಗುದ್ದಿದೆ. ಗಂಭೀರ ಗಾಯಗೊಂಡ ಲೂವಿಸ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪುತ್ತೂರು ಸಂಚಾರ…

Read More

ಕಾಪು : ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು..!

ಕಾಪು: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕಾಪುವಿನ ಪಾಂಗಾಳ ಗ್ರಾಮದ ಜಾಸ್ಮೀನ್ ಪ್ಲವರ್ ಸ್ಟಾಲ್ ಬಳಿ ರಾ. ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಮೈಲಾರಪ್ಪ(53) ಎಂದು ತಿಳಿಯಲಾಗಿದೆ. ಇವರು ಕೆಲಸ ನಿಮಿತ್ತ ಉಡುಪಿಯಿಂದ ಕಾಪು ಕಡೆಗೆ ಹೋಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿತ್ತೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಪಹಲ್ಗಾಮ್ ಉಗ್ರ ದಾಳಿ : ಭಾರತೀಯ ಸೇನೆಯಿಂದ 14 ಮೋಸ್ಟ್ ವಾಂಟೇಡ್ ಭಯೋತ್ಪಾದಕರ ಪಟ್ಟಿ ರಿಲೀಸ್.!

ಶ್ರೀನಗರ : ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ದೇಶದ ಜನರಲ್ಲಿ ಭಯೋತ್ಪಾದಕರ ವಿರುದ್ಧ ಭಾರಿ ಕೋಪವಿದೆ. ಅದೇ ಸಮಯದಲ್ಲಿ, ಘಟನೆಯನ್ನು ನಡೆಸಿದ ಭಯೋತ್ಪಾದಕರಿಗಾಗಿ ಭದ್ರತಾ ಸಂಸ್ಥೆಗಳು ನಿರಂತರವಾಗಿ ಹುಡುಕಾಟ ನಡೆಸುತ್ತಿವೆ. ಏತನ್ಮಧ್ಯೆ, ತನಿಖಾ ಸಂಸ್ಥೆಗಳು ಜಮ್ಮು ಮತ್ತು ಕಾಶ್ಮೀರದ 14 ಭಯೋತ್ಪಾದಕರ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಈ ಎಲ್ಲಾ ಸ್ಥಳೀಯ ಭಯೋತ್ಪಾದಕರು ಪಾಕಿಸ್ತಾನದಿಂದ ಬರುವ ಭಯೋತ್ಪಾದಕರಿಗೆ ಸಹಾಯ ಮಾಡುತ್ತಾರೆ ಮತ್ತು…

Read More

ವರ್ಕ್ ಫ್ರಮ್ ಹೋಮ್:‌ ಕರೆ ನಂಬಿ 12 ಲಕ್ಷ ಕಳೆದುಕೊಂಡರು..

ಮಂಗಳೂರು: ಮನೆಯಲ್ಲೇ ಕುಳಿತು ದಿನಕ್ಕೆ2-3 ಸಾವಿರ ರೂ. ಸಂಪಾದಿಸಬಹುದು ಎಂದು ಬಂದ ಕರೆಯನ್ನು ನಂಬಿ ವ್ಯಕ್ತಿಯೊಬ್ಬರು 12,15,012 ರೂ. ಕಳೆದುಕೊಂಡ ಘಟನೆ ನಡೆದಿದೆ. ದೂರುದಾರರಿಗೆ ಮಾ.30 ರಂದು ಕರೆ ಬಂದಿದ್ದು, ಕರೆ ಮಾಡಿದಾಕೆ ಪ್ರೀತಿ ಶರ್ಮಾ ಎಂದು ಪರಿಚಯಿಸಿಕೊಂಡು ದಿನಕ್ಕೆ ೨-೩ ಸಾವಿರ ರೂ. ಸಂಪಾದನೆ ಮಾಡಲು ಅವಕಾಶವಿದೆ. ಡಾಟಾ ಕ್ಲಿಕ್ ಎಂಬ ಸಂಸ್ಥೆಯಿಂದ ಈ ಕೆಲಸವನ್ನು ಮಾಡುವುದಾಗಿ ಹಾಗೂ ಇದು ಯೂನೋ ಕಾಯಿನ್ ಟೆಕ್ನಾಲಜಿ ಎಂಬ ಸಂಸ್ಥೆಯ ಸಹ ಸಂಸ್ಥೆ ಎಂದು ತಿಳಿಸಿದ್ದಾಳೆ. ಬಳಿಕ ಅವರ…

Read More

ಬೆಳ್ತಂಗಡಿ: ಲಾರಿ – ಗೂಡ್ಸ್ ವಾಹನಕ್ಕೆ ಡಿಕ್ಕಿ..! ಚಾಲಕ ಪರಾರಿ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ನರ್ಸರಿ ಬಳಿ ಲಾರಿಯೊಂದು ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಎ. 24ರಂದು ಸುಲ್ಕೇರಿ ನರ್ಸರಿ ಬಳಿ ನಡೆದಿದೆ. ಲಾರಿ ಚಾಲಕನ ದುಡುಕುತನದಿಂದ ರಸ್ತೆಯ ಬಲಬದಿಗೆ ಚಲಾಯಿಸಿದ ಪರಿಣಾಮ ನಾರಾವಿ ಕಡೆಯಿಂದ ಬರುತ್ತಿದ್ದ ಕಾಯರ್ತಡ್ಕ ಗ್ರಾಮದ ಕಳಂಜ ಮರಕಡ ನಿವಾಸಿ ಗಣೇಶ್ ಗೌಡ (49ವ)ರವರ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆ ನಂತರ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾರೆ. ಅಪಘಾತದಿಂದ ಗಣೇಶ್ ಗೌಡರ ವಾಹನ ಜಖಂಗೊಂಡಿದರ ಜೊತೆಗೆ ಗಾಯವಾಗಿದೆ ಎನ್ನಲಾಗಿದೆ. ಉಜಿರೆಯ ಖಾಸಗಿ…

Read More

ಪಹಲ್ಗಾಮ್ ದಾಳಿ ಬೆನ್ನಲ್ಲೇ ಭಾರತೀಯ ಸೇನೆಯಿಂದ ಭರ್ಜರಿ ಕಾರ್ಯಾಚರಣೆ : ಇಬ್ಬರು ಉಗ್ರರು ಅರೆಸ್ಟ್

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಬೇಟೆ ಆರಂಭವಾಗಿದ್ದು, ಎಲ್‌ಒಸಿಯಲ್ಲಿ ರಾತ್ರಿಯಿಡೀ ಗುಂಡಿನ ಚಕಮಕಿ ಮುಂದುವರೆದಿದ್ದು, ಕುಲ್ಗಾಮ್‌ನಲ್ಲಿ ಇಬ್ಬರು ಭಯೋತ್ಪಾದಕರ ಬಂಧನವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ  ಇಬ್ಬರು ಭಯೋತ್ಪಾದಕರ ಬಂಧನವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಥೋಕರ್ಪೋರಾದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಬಂಧಿಸಿವೆ. ಈ ಮಾಹಿತಿ ಪೊಲೀಸ್ ಮೂಲಗಳಿಂದ ಬಂದಿದೆ.

Read More

ಮಂಗಳೂರಿನಲ್ಲಿ ಪಾಕಿಸ್ಥಾನದ ಮೂವರು ವಿವಾಹಿತ ಮಹಿಳೆಯರು

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂರು ಮಂದಿ ಪಾಕಿಸ್ಥಾನಿ ಮಹಿಳೆಯರು ವಾಸ್ತವ್ಯವಿರುವುದು ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ಇವರು 12-13 ವರ್ಷಗಳ ಹಿಂದೆಯೇ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿ ಭಾರತೀಯ ಪ್ರಜೆಗಳನ್ನು ಮದುವೆಯಾಗಿದ್ದಾರೆ. ಈ ಪೈಕಿ ಒಬ್ಬರು ನಗರದ ಫಳ್ನೀರ್, ಇನ್ನೊಬ್ಬರು ವಾಮಂಜೂರಿನಲ್ಲಿ ನೆಲೆಸಿದ್ದಾರೆ. ಇನ್ನೊಬ್ಬ ಮಹಿಳೆಯ ವಾಸಸ್ಥಳದ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಈಗಾಗಲೇ ರಾಜ್ಯ ಸರಕಾರಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ಸರಕಾರದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಜಿಲ್ಲಾ…

Read More

ಪಹಲ್ಗಾಂ ಭಯೋತ್ಪಾದಕ ದಾಳಿ ಸಮರ್ಥಿಸಿಕೊಂಡ ಮಂಗಳೂರಿನ ವ್ಯಕ್ತಿಯ ಅರೆಸ್ಟ್..!!

ಮಂಗಳೂರು: ಹಿಂದಿನ ಅಪರಾಧ ಕೃತ್ಯವೊಂದನ್ನು ಉಲ್ಲೇಖಿಸಿ ಪಹಲ್ಗಾಂ ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಂಡಿದ್ದ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ ರೈಲ್ವೆ ನಿಲ್ದಾಣದಲ್ಲಿ ಮೂವರು ಮುಸ್ಲಿಮರನ್ನು ಹತ್ಯೆ ಮಾಡಿದ್ದ ಚೇತನ್ ಸಿಂಗ್ ಎಂಬಾತನಿಗೆ ಶಿಕ್ಷೆಯಾಗಿದ್ದರೆ ಇಂದು ಕಾಶ್ಮೀರದಲ್ಲಿ ಇಂತಹ ಕೃತ್ಯ ನಡೆಯುತ್ತಿರಲಿಲ್ಲ ಎಂದು ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುವ ಮೂಲಕ ಪಹಲ್ಗಾಮ್ ಉಗ್ರ ದಾಳಿಯನ್ನು ಈತ ಸಮರ್ಥಿಸಿಕೊಂಡಿದ್ದ.ನಿಚ್ಚು ಮಂಗಳೂರು ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಇಂಥ ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಉಳ್ಳಾಲ ತಾಲೂಕಿನ ನಿವಾಸಿ ಸತೀಶ್ ಕುಮಾರ್ ಎಂಬವರು…

Read More