ಎನ್ಕೌಂಟರ್ನಲ್ಲಿ ಎಲ್‌ಇಟಿ ಟಾಪ್ ಕಮಾಂಡರ್​ ಅಲ್ತಾಫ್ ಲಲ್ಲಿ ಫಿನಿಶ್..!!

ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೋಯ್ಬಾ(ಎಲ್‌ಇಟಿ) ಸಂಘಟನೆಯ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಹತ್ಯೆಗೀಡಾಗಿದ್ದಾನೆ. ಸೇನೆ ಮತ್ತು ಪೊಲೀಸರು ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಜಂಟಿ ಕಾರ್ಯಾಚರಣೆಗೆ ಇಳಿದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದು, ಇದಕ್ಕೆ ಪ್ರತೀಯಾಗಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಟಾಪ್ ಕಮಾಂಡರ್ ಅಲ್ತಾಫ್ ಹತ್ಯೆಗೀಡಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟ ಹಿನ್ನೆಲೆಯಲ್ಲಿ, ಉಗ್ರರನ್ನು ಸೆದೆಬಡಿಯುವ…

Read More

ಕಡಬ: ಬ್ರೈನ್ ಸ್ಟ್ರೋಕ್ ನಿಂದ ನಿಧನರಾದ ಖ್ಯಾತ ಕಬಡ್ಡಿ ಆಟಗಾರ

ಕಡಬ: ಕರಾವಳಿಯ ಹೆಸರಾಂತ ಆಟಗಾರ, ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರೋ ಕಬಡ್ಡಿಯಲ್ಲಿ ಲಕ್ಷಾಂತರ ಅಭಿಮಾನಿಗಳ ಗಮನ ಸೆಳೆದ ಕಡಬದ ಯುವ ಆಟಗಾರ ಕೋಕಿಲಾನಂದ ನಿಧನ ಹೊಂದಿದ್ದಾರೆ. ಬಡತನವಿದ್ದರೂ ಹೃದಯ ಶ್ರೀಮಂತಿಕೆ ಇದ್ದ ಇವರು ಕೆಲವು ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿ ಜೈಲಿಗೂ ಹೋಗಿ ಬಂದಿದ್ದರು. ಕಡಬ ನಿವಾಸಿಯಾಗಿದ್ದ ಇವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ತಂದೆಗೆ ಹೃದಯದ ಖಾಯಿಲೆಯಿದ್ದು ತಾಯಿ ಕೂಡಾ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಪತ್ನಿ ಪಂಚಾಯತ್ ನಲ್ಲಿ ಮೂರು ದಿನ ಕೆಲಸ…

Read More

ಮಂಗಳೂರು: ಫೇಸ್‌ಬುಕ್‌ನಲ್ಲಿ ಪಹಲ್ಗಾಮ್‌ ದಾಳಿ ಸಮರ್ಥಿಸಿ ಪೋಸ್ಟ್‌..! ಪ್ರಕರಣ ದಾಖಲು

ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್​ ಹಾಕಿದ್ದ ಫೇಸ್‌ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು‌ ನೀಡಿದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 192 ಮತ್ತು 353(1)(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್​ಬುಕ್ ಪೇಜ್​ನ ಡಿಪಿ‌ಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ, 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು ಮುಸ್ಲಿಮರನ್ನು‌ ಕೊಲ್ಲಲಾಗಿತ್ತು. ಆರೋಪಿ ಚೇತನ್…

Read More

ಮೂಡುಬಿದಿರೆ: ನಿಡ್ಡೋಡಿ ಮಹಿಳೆ ಕೊಲೆ ಪ್ರಕರಣದ ಆರೋಪಿ ಖುಲಾಸೆ

ಮಂಗಳೂರು: ನಿಡ್ಡೋಡಿಯ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಕರಣದ ಆರೋಪಿ ಶೇಖರ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದೆ. 2016ರ ಜ. 12ರಂದು ನಿಡ್ಡೋಡಿಯ ಯಮುಲ ಮನೆ ನಿವಾಸಿ ರೇವತಿ ನಿಡ್ಡೋಡಿಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟಿದ್ದವರು ಮರಳಿ ಬಂದಿರಲಿಲ್ಲ. ಅವರ ಅಣ್ಣ ತಿಮ್ಮಪ್ಪ ಮಡಿವಾಳ ಅವರು ತಂಗಿ ರೇವತಿ ಕಾಣೆಯಾಗಿರುವ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ನೀಡಿದ್ದರು. ಸ್ಥಳೀಯ ಶುಂಠಿಲ ಪದವಿನ ನಿವಾಸಿಯಾದ ಶೇಖರ ಶೆಟ್ಟಿ ಅವರ ಮೇಲೆ…

Read More

ಪಹಲ್ಗಾಮ್ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಉಗ್ರರ ಮನೆಗಳು ಧ್ವಂಸ!

ಶ್ರೀನಗರ : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜಮ್ಮು ಕಾಶ್ಮೀರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಭಯೋತ್ಪಾದಕರ ನಿವಾಸಗಳನ್ನು ಭಾರತೀಯ ಸೇನೆ ದ್ವಂಸಗೊಳಿಸಿದೆ. ಹೌದು ಕಳೆದ ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಉಗ್ರರ ದಾಳಿಯಲ್ಲಿ ಆದಿಲ್ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದ್ದು, ಪಾಕಿಸ್ತಾನದಲ್ಲಿ ಭಯೋತ್ಪಾದಕ ಆದಿಲ್ ಉಗ್ರ ತರಬೇತಿ ಪಡೆದಿದ್ದ. 2018 ರಲ್ಲಿ ಆದಿಲ್ ಪಾಕಿಸ್ತಾನಕ್ಕೆ…

Read More

ಪ್ರತಿಯೊಬ್ಬ ಭಯೋತ್ಪಾದಕನನ್ನು ಗುರುತಿಸಿ, ಪತ್ತೆಹಚ್ಚಿ ಶಿಕ್ಷಿಸುತ್ತೇವೆ: ಪ್ರಧಾನಿ ಮೋದಿ ದೊಡ್ಡ ಸಂದೇಶ

ನವದೆಹಲಿ: ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸಿ, ಪತ್ತೆಹಚ್ಚಿ ಶಿಕ್ಷಿಸುತ್ತೇವೆ ಎಂಬುದಾಗಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ಮೋದಿ ಅವರ ದೊಡ್ಡ ಸಂದೇಶವನ್ನು ನೀಡಿದ್ದಾರೆ.

Read More

ಉಪ್ಪಿನಂಗಡಿ: ಎರಡು ಮನೆಗಳಿಗೆ ನುಗ್ಗಿದ ಕಳ್ಳ ..!! ನಗ- ನಗದು ಕಳವು

ಉಪ್ಪಿನಂಗಡಿ: ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕಳವು ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ ಮತ್ತು ನಾದಿನಿ ಮನೆಯೊಳಗೆ ಮಲಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ಕಳ್ಳ ಒಟ್ಟು 12 ಗ್ರಾಂ ತೂಕವಿರುವ 3 ಉಂಗುರ, ಹಾಗೂ 6 ಗ್ರಾಂ ತೂಕವಿರುವ 4 ಉಂಗುರ ಮತ್ತು 3 ಸಾವಿರ ನಗದು ಹಣ ಕದ್ದೊಯ್ದಿದ್ದಾನೆ. ಇದೇ ಗ್ರಾಮದ ಕೋಡಿ…

Read More

ಸಿಂಧೂ ನದಿ ಒಪ್ಪಂದ ರದ್ದು ಮಾಡುವುದರಿಂದ ಏನಾಗುತ್ತದೆ..? ಉಗ್ರ ಪಾಕ್‌ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟ ಭಾರತ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ದಾಳಿಯಿಂದ ಇಡೀ ದೇಶ ಕನಲಿ ಹೋಗಿದ್ದು, ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಪಾಕ್‌ ಸಂಬಂಧಕ್ಕೆ ಎಳ್ಳುನೀರು ಬಿಡಲು ತೀರ್ಮಾನಿಸಲಾಗಿದೆ. ದಾಳಿ ನಡೆಸಿದ ಟಿಆರ್​ಎಫ್​ ಪಾಕಿಸ್ಥಾನ ಮೂಲದ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೋಯ್ಬಾ (ಎಲ್‌ಇಟಿ)ದ ಸೋದರ ಸಂಘಟನೆಯಾಗಿದೆ. ಹೀಗಾಗಿ ಭಾರತದ ಮೇಲಿನ ದಾಳಿಗೆ ಪಾಕಿಸ್ಥಾನ…

Read More

ಸಿಂಧೂ ಜಲ ಒಪ್ಪಂದ ರದ್ದು, ಪಾಕಿಸ್ತಾನಿಗಳಿಗೆ ಭಾರತ ಪ್ರವೇಶವಿಲ್ಲ: ಪಹಲ್ಗಾಮ್ ದಾಳಿಗೆ ಮೋದಿ ಪ್ರತ್ಯುತ್ತರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಾಗರಿಕರ ಮೇಲೆ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡು ಬಲವಾದ ರಾಜತಾಂತ್ರಿಕ ಮತ್ತು ಕಾರ್ಯತಂತ್ರದ ಪ್ರತಿಕ್ರಮಗಳನ್ನು ಭಾರತ ಬುಧವಾರ ಪ್ರಕಟಿಸಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ನಿರ್ಣಾಯಕ ಪ್ರತಿಕ್ರಿಯೆ ಎಂದು ಅಧಿಕಾರಿಗಳು ಕರೆದಿರುವ ಭಾಗವಾಗಿ ವಿದೇಶಾಂಗ ಸಚಿವಾಲಯ (ಎಂಇಎ) ಐದು ಪ್ರಮುಖ ಕ್ರಮಗಳನ್ನು ವಿವರಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಮಾಡಿದ 5 ಪ್ರಮುಖ ಪ್ರಕಟಣೆಗಳು ಇಲ್ಲಿವೆ ಸಿಂಧೂ ನದಿ ನೀರು ಸ್ಥಗಿತಅಟ್ಟಾರಿ-ವಾಘಾ ಗಡಿ ಬಂದ್ಭಾರತಕ್ಕೆ ಪಾಕ್ ರಾಷ್ಟ್ರಗಳ ಪ್ರವೇಶವಿಲ್ಲಪಾಕಿಸ್ತಾನ…

Read More

ಉಗ್ರರಿಗೆ ಧನ್ಯವಾದ ಹೇಳಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್- ವ್ಯಕ್ತಿ ಅರೆಸ್ಟ್

ಜಾರ್ಖಂಡ್: ಪಹಲ್ಗಾಮ್ನಲ್ಲಿ ಭಯೋತ್ಪಾದಕರು 28 ಮುಗ್ಧ ಜನರನ್ನು ಕ್ರೂರವಾಗಿ ಕೊಂದಿರುವುದಕ್ಕೆ ಇಡೀ ದೇಶ ಶೋಕಿಸುತ್ತಿದೆ. ಇತರ ದೇಶಗಳ ನಾಯಕರು ಸಹ ಈ ಘಟನೆಯನ್ನು ಬಲವಾದ ಪದಗಳಲ್ಲಿ ಖಂಡಿಸಿದ್ದಾರೆ. ಇದರ ನಡುವೆ ಪ್ರವಾಸಿಗರನ್ನು ಕೊಂದ ಉಗ್ರರಿಗೆ ಧನ್ಯವಾದ ಹೇಳಿ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ್ದನು. ಅಂತಹ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್ನ ಬೊಕಾರೊ ನಿವಾಸಿ ಮೊಹಮ್ಮದ್ ನೌಶಾದ್ ಮುಗ್ಧ ಪ್ರವಾಸಿಗರ ಹತ್ಯೆಯಿಂದ ಸಂತೋಷಗೊಂಡಿದ್ದಾರೆ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಲ್ಲದೆ. ಅಲ್ಲದೇ ಭಯೋತ್ಪಾದಕರು ಮಾಡಿದ…

Read More